ಪ್ರಸ್ತುತ ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಪ್ರಖರವಾದ ಬಿಸಿಲು ಕಂಡುಬರುತ್ತಿದ್ದು, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಕಾರದೊಂದಿಗೆ ಜಿಲ್ಲೆಯಲ್ಲಿ ನಿರ್ಜಲೀಕರಣವನ್ನು ತಡೆಗಟ್ಟಲು ತುರ್ತು ಚಿಕಿತ್ಸಾ ಕೇಂದ್ರಗಳಲ್ಲಿ ಓಆರ್ಎಸ್ ಜೀವಜಲವನ್ನು ಸಿದ್ದಪಡಿಸಿ ಪ್ರಮುಖ ಜಾತ್ರೆಗಳಲ್ಲಿ ಹಾಗೂ ಇತರೆಡೆ ಜನತೆಗೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ತಿಳಿಸಿದ್ದಾರೆ.
Summer Protection Tips: ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್ ಹಾಗೂ ಛತ್ರಿ ಮತ್ತು ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು. ಆದಷ್ಟು ನೆರಳಿನಲ್ಲಿ ಇರುವಂತೆ ಗಮನ ಹರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.