ಸರ್ಜಿಕಲ್ ದಾಳಿಗಳು ಈ ಹಿಂದಿನ ಸರ್ಕಾರದ ಅವಧಿಯಲ್ಲಿಯೂ ಕೂಡ ನಡೆದಿದ್ದವು ಎಂದು ಲೆಫ್ಟಿನೆಂಟ್ ಜನರಲ್(ನಿವೃತ್ತ) ಡಿ.ಎಸ್ ಹೂಡಾ ಹೇಳಿದ್ದಾರೆ.ಮೋದಿ ಸರ್ಕಾರದಲ್ಲಿ ಮೊದಲ ಬಾರಿಗೆ ಸರ್ಜಿಕಲ್ ದಾಳಿ ನಡೆದಿವೆ ಎಂದು ಬಿಜೆಪಿ ಹೇಳಿಕೊಳ್ಳುತ್ತಿರುವ ಸಂದರ್ಭದಲ್ಲಿ ಈಗ ಹೂಡಾ ಹೇಳಿಕೆ ಬಂದಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ 6 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ. ಆದರೆ ಕಾಂಗ್ರೆಸ್ ಎಂದಿಗೂ ಇದರ ಕ್ರೆಡಿಟ್ ತೆಗೆದುಕೊಳ್ಳಲು ಪ್ರಯತ್ನಿಸಿಲ್ಲ. ಆದರೆ ಕೇವಲ ಒಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದವರು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.