ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಅವರ ಕ್ಷೇತ್ರವಾದ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್ ಜಿಲ್ಲೆಯ ನಂದಿಗ್ರಾಮ್ನಲ್ಲಿ ಭಾನುವಾರ ನಡೆದ ಸಹಕಾರಿ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
170 ಕ್ಕೂ ಹೆಚ್ಚು ಸ್ಥಾನಗಳು ಸಿಗಲಿವೆ ಎಂಬ ಹಲವಾರು ನಾಯಕರ ಅತಿಯಾದ ಆತ್ಮವಿಶ್ವಾಸದಿಂದಾಗಿ ಬಿಜೆಪಿ ಸೋತಿದೆ ಎಂದು ಬಂಗಾಳ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಭಾನುವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಪಕ್ಷ ಭರ್ಜರಿ ಜಯ ಸಾಧಿಸಿದೆ.ಆದರೆ ಅವರು ನಂದಿಗ್ರಾಮದಲ್ಲಿ ಬಿಜೆಪಿಯ ಸುವೇಂಡು ಅಧಿಕಾರಿ ವಿರುದ್ಧ ಸೋಲನ್ನು ಅನುಭವಿಸಿದ್ದಾರೆ. "ನಾನು ನಂದಿಗ್ರಾಮ್ನಲ್ಲಿ ತೀರ್ಪನ್ನು ಒಪ್ಪುತ್ತೇನೆ - ಇದು ದೊಡ್ಡ ವಿಷಯವಲ್ಲ. ಚಿಂತಿಸಬೇಡಿ" ಎಂದು ಅವರು ಹೇಳಿದ್ದಾರೆ.
West Bengal And Assam Phase 2 Voting: ಪಶ್ಚಿಮ ಬಂಗಾಳದ ಜೊತೆಗೆ, ಇಂದು ಈಶಾನ್ಯದ ಅತಿದೊಡ್ಡ ರಾಜ್ಯವಾದ ಅಸ್ಸಾಂನಲ್ಲಿಯೂ ಎರಡನೇ ಹಂತದ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದ 30 ಸ್ಥಾನಗಳು ಮತ್ತು ಅಸ್ಸಾಂನ 39 ಸ್ಥಾನಗಳಲ್ಲಿ ಇಂದು ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ 30 ವಿಧಾನಸಭಾ ಸ್ಥಾನಗಳಿಗೆ 171 ಅಭ್ಯರ್ಥಿಗಳು ಕಣದಲ್ಲಿದ್ದರೆ, ಅಸ್ಸಾಂನ 39 ಸ್ಥಾನಗಳಿಗೆ 345 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮ್ನಲ್ಲಿ 2 ಮನೆಗಳನ್ನು ಬಾಡಿಗೆಗೆ ತೆಗೆದುಕೊಂಡಿದ್ದಾರೆ. ಚುನಾವಣೆ ಮಧ್ಯೆ ಸಿಎಂ ಬ್ಯಾನರ್ಜಿಯ ಈ ನಡೆ ಎಲ್ಲರನ್ನು ಅಚ್ಚರಿಗೊಳಿಸಿದೆ.
ತೃಣಮೂಲ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕ ಸಿಸಿರ್ ಅಧಿಕಾರಿ (Sisir Adhikari) ಆಹ್ವಾನ ಸಿಕ್ಕರೆ ಮಾರ್ಚ್ 20ರಂದು ಕಂಠಿಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೊದಿಯವವರ ರ್ಯಾಲಿಯಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ಇದಲ್ಲದೆ ಸಿಸಿರ್ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.
ಪಶ್ಚಿಮ ಬಂಗಾಳದಲ್ಲಿನ ಚುನಾವಣಾ ಹೈ-ವೋಲ್ಟೇಜ್ ಯುದ್ಧವು ಇನ್ನಷ್ಟು ಆಸಕ್ತಿದಾಯಕವಾಗಿದೆ, ಏಕೆಂದರೆ ನಂದಿಗ್ರಾಮ್ನ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಡು ಅಧಿಕಾರಿ ಕಣಕ್ಕೆ ಇಳಿಯಲಿದ್ದಾರೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.