Telangana government new ration card: ತೆಲಂಗಾಣ ವಿಧಾನ ಪರಿಷತ್ತಿನಲ್ಲಿ ಸೋಮವಾರ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಎಂಎಲ್ಸಿಗಳಾದ ಕೋದಂಡ ರೆಡ್ಡಿ, ಮಿರ್ಜಾ ರಿಯಾಜುಲ್ ಹಸನ್, ಜೀವನ್ ರೆಡ್ಡಿ, ಸತ್ಯವತಿ ರಾಥೋಡ್ ಮತ್ತಿತರರು ಪ್ರಶ್ನೆಗಳನ್ನು ಕೇಳಿದರು. ಈ ಸಂದರ್ಭದಲ್ಲಿ ಸಚಿವ ಉತ್ತಮ್ ಕುಮಾರ್ ರೆಡ್ಡಿ ಅವರಿಗೆ ಉತ್ತರ ನೀಡಿ ಹೊಸ ಪಡಿತರ ಚೀಟಿ ವಿಚಾರ ಪ್ರಸ್ತಾಪಿಸಿದರು.
2 Lakh Crop Loan Waiver: ಸಂಪುಟ ಸಭೆಯ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ ರೇವಂತ್ ರೆಡ್ಡಿಯವರು, ಎಲ್ಲಾ ಬೆಳೆ ಸಾಲ ಮನ್ನಾ ಮಾಡಲು ಅಂದಾಜು 31,000 ಕೋಟಿ ರೂ. ಹಣದ ಅಗತ್ಯವಿದೆ ಎಂದು ಹೇಳಿದ್ದಾರೆ.
International Women's Day: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ತೆಲಂಗಾಣ ಸರ್ಕಾರವು ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ವಿಶೇಷ ರಜೆಯನ್ನು ನೀಡಿದೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಕೂಡ ಮಹಿಳೆಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಹಿಳಾ ಪಶು ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಗಾಗಿ ಮಹಾಬುಬ್ ನಗರ್ ಜಿಲ್ಲಾ ನ್ಯಾಯಾಲಯದಲ್ಲಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗುವುದು ಎಂದು ತೆಲಂಗಾಣ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ದಿಷ್ಟ ಮುಷ್ಕರ ಕೈಗೊಂಡಿರುವ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್ಆರ್ಟಿಸಿ) 48,000 ಉದ್ಯೋಗಿಗಳನ್ನು ಮತ್ತು ಕಾರ್ಮಿಕರನ್ನು ಕೆ.ಚಂದ್ರಶೇಖರ್ ರಾವ್ ನೇತೃತ್ವದ ಸರ್ಕಾರ ಭಾನುವಾರ ವಜಾ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.