IMD : ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ ಮಳೆ ಮತ್ತು ಗುಡುಗುಸಹಿತಬಿರುಗಾಳಿಗಳು, ಕೆಲವು ಪ್ರದೇಶಗಳಲ್ಲಿ ಸಾಂದರ್ಭಿಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 22 ° C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ.
Lightning Protection: ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸೂಚಿಸಿದೆ.
Rain Update: ಮುಂದಿನ ಮೂರರಿಂದ ನಾಲ್ಕು ದಿನಗಳವರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣ ಆರ್ಭಟಿಸಲಿದ್ದು ಈ ಸಮಯದಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ನಿಗಾವಹಿಸುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ನಿಟ್ಟಿನಲ್ಲಿ ಸ್ಪೆಷಲ್ ಟ್ರಾಫಿಕ್ ಕಮಿಷನರ್ ಸಲೀಂ ಅವರು ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಟಾಸ್ಕ್ ನೀಡಿದ್ದು, ಕಾರ್ಯ ನಿರ್ವಹಣೆಯ ಸ್ಥಳದ ವ್ಯವಸ್ಥೆ ಬಗ್ಗೆ ಮ್ಯಾಪಿಂಗ್ ಮಾಡಲು ಸೂಚಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ನಿನ್ನೆ ಮಳೆ ಆರಂಭಕ್ಕೂ ಮುನ್ನ ಆರಂಭವಾದ ಗುಡುಗು-ಸಿಡಿಲಿನ ಮಧ್ಯೆ ಶೃಂಗೇರಿ ಶಾರದಾಂಭೆ ದೇಗುಲದ ದೃಶ್ಯಕಾವ್ಯ ನೊಡುಗರ ಮನಸೊರೆಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.