ಕೇರಳದ ಸಾಕಷ್ಟು ಮಕ್ಕಳಲ್ಲಿ ಈ ಸೋಂಕು ಕಾಣಿಸಿಕೊಂಡಿದೆ ಎಂಬುದರ ಬಗ್ಗೆ ದಿನೇ ದಿನೇ ವರದಿಯಾಗುತ್ತಿದ್ದು, ಇದರಿಂದ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದೆ. ಈ ಹೊಸ ಸೋಂಕು ಮಕ್ಕಳಿಗೆ ಹೆಚ್ಚು ಕಾಣಿಸಿಕೊಳ್ಳುವ ಸೂಚನೆ ಇರೋದ್ರಿಂದ ಇನ್ನೆಲ್ಲಿ ನಮ್ಮ ಮಕ್ಕಳಿಗೆ ಹೊಸ ರೋಗಾಣು ಕಾಣಿಸಿಕೊಳ್ಳುತ್ತದೆಯೋ ಎನ್ನುವ ಭಯ ಮರುಕಳಿಸಿದೆ.
ಕೊರೊನಾ ಆಯ್ತು ಈಗ ಟೊಮೆಟೋ ಪ್ಲೂ.. ಕೇರಳದಲ್ಲಿ ಆತಂಕ ಸೃಷ್ಟಿಸಿರೋ ಈ ಫ್ಲೂ ಕರ್ನಾಟಕದ ರಾಜ್ಯದಲ್ಲೂ ಕಾಣಿಸಿಕೊಂಡಿದೆ. ಕೇರಳ ಗಡಿ ಮಂಗಳೂರು ಬಳಿ ಮಗುವೊಂದಕ್ಕೆ ಸೋಂಕು ಕಾಣಿಸಿಕೊಂಡಿದ್ದು ಪೋಷಕರನ್ನು ಕಂಗೆಡಿಸಿದೆ.
ಕೊರೊನಾ ಬೆನ್ನಲ್ಲೇ ಮತ್ತೊಂದು ಮಹಾಮಾರಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆಯಾ ಎಂಬ ಆತಂಕ ಶುರುವಾಗಿದೆ. ಶಂಕಿತ ಟೊಮೊಟೋ ವೈರಸ್ ರಾಜ್ಯದಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಕೇರಳ ಗಡಿಭಾಗ ಉಡುಪಿಯಲ್ಲಿ ವೈರಸ್ ಪತ್ತೆಯಾಗಿದೆ. ಇದೀಗ ಕೇರಳ ಗಡಿ ಪ್ರದೇಶದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇನ್ನು ರಾಜ್ಯ ಆರೋಗ್ಯ ಇಲಾಖೆಯಿಂದ ಬಿಬಿಎಂಪಿಗೆ ಎಚ್ಚರಿಕೆಯ ಸಂದೇಶ ರವಾನೆಯಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಐದು ವರ್ಷಕ್ಕೂ ಕಡಿಮೆ ವಯಸ್ಸಿನ ಮಕ್ಕಳಲ್ಲಿ ನಿಗೂಢ ಕಾಯಿಲೆ ಕಾಣಿಸಿಕೊಂಡಿದೆ. ಮಕ್ಕಳ ಮೈಮೇಲೆ ಕೆಂಪು ಗುಳ್ಳೆ ಕಾಣಿಸಿಕೊಂಡಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದಾರೆ.
ಸಾಮಾನ್ಯವಾಗಿ 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಕಂಡುಬರುವ ಈ ರೋಗ, ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿದೆ. ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸ ಮೊದಲಾದ ಲಕ್ಷಣಗಳೂ ಕಂಡುಬರುತ್ತವೆ.
ಕೇರಳದಲ್ಲಿ ಇದುವರೆಗೆ ಐದು ವರ್ಷದೊಳಗಿನ 80ಕ್ಕೂ ಹೆಚ್ಚು ಮಕ್ಕಳಲ್ಲಿ ಟೊಮೇಟೊ ಜ್ವರ ಕಾಣಿಸಿಕೊಂಡಿದೆ. ಸೋಂಕು ತಡೆಗಟ್ಟಲು ಕ್ರಮ ಕೈಗೊಳ್ಳದಿದ್ದರೆ ವೈರಸ್ ಮತ್ತಷ್ಟು ಹರಡಬಹುದು ಎಂದು ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.