ಐತಿಹಾಸಿಕ ಕೆಂಪು ಕೋಟೆಯಲ್ಲಿ ಮಂಗಳವಾರ ನಡೆದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪಂಜಾಬಿ ನಟ ಮತ್ತು ಗಾಯಕ ದೀಪ್ ಸಿಧು ಮತ್ತು ಲಖಾ ಸಿದ್ಧನಾ ಅವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.
ದೆಹಲಿ ಹಿಂಸಾಚಾರದ ಬಳಿಕ ಹೆಚ್ಚಿನ ಅನಾಹುತ ಸಂಭವಿಸದಂತೆ ಪೊಲೀಸ್ ಇಲಾಖೆ ಕಠಿಣಕ್ರಮ ಕೈಗೊಂಡಿದೆ. ನಿನ್ನೆಯಿಂದಲೇದೆಹಲಿಯ ಕೆಲ ಭಾಗಗಳಲ್ಲಿ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಾಕಿರುವ ಕಾರಣ 300 ಖಾತೆಗಳನ್ನು ಟ್ವಿಟರ್ ಸಸ್ಪೆಂಡ್ ಮಾಡಿದೆ.
ಕೃಷಿ ಕಾನೂನು ವಿರೋಧಿಸಿ ರೈತರು ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾರೂಪಕ್ಕೆ ತಿರುಗಿದ ಬೆನ್ನಲ್ಲೇ ರ್ಯಾಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿರುವುದಾಗಿ ರೈತರ ಪರ ಸಂಘಟನೆಗಳು ಘೋಷಣೆ ಮಾಡಿವೆ.
ಈ ಪ್ರತಿಭಟನಾತ್ಮಕ ಟ್ರ್ಯಾಕ್ಟರ್ ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ರೈತ ಸಂಘಟನೆಗಳು ಭಾಗವಹಿಸುತ್ತಿದ್ದು ಎಲ್ಲಾ ಸಂಘಟನೆಗಳಿಗೂ ಭಿನ್ನ ಭಿನ್ನವಾದ ಸ್ತಬ್ಧಚಿತ್ರಗಳನ್ನು ರೂಪಿಸುವಂತೆ ಸೂಚಿಸಲಾಗಿದೆ. ದೇಶದೆಲ್ಲೆಡೆಯಿಂದ ಸುಮಾರು ಒಂದು ಲಕ್ಷ ಟ್ರ್ಯಾಕ್ಟರ್-ಟ್ರಾಲಿಗಳು ಭಾಗವಹಿಸಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.