ಸೋಮವಾರ ಬೆಳಗ್ಗೆ 10.40ಕ್ಕೆ ಆರಂಭವಾದ ವಿಧಾನಸಭೆ ಕಲಾಪ ತಡರಾತ್ರಿ ತಡರಾತ್ರಿರವರೆಗೂ ನಡೆಯಿತು. ರಾತ್ರಿ 1 ಗಂಟೆ ಬಳಿಕವೂ ಮುಂದುವರಿದಿತ್ತು. ರಾತ್ರಿ 12.25ಕ್ಕೆ ತುಳು ಭಾಷೆಗೆ ಅಧಿಕೃತ ರಾಜ್ಯ ಭಾಷೆಯ ಸ್ಥಾನಮಾನ ಆರಂಭಿಸಿದ ಕಾಂಗ್ರೆಸ್ ಸದಸ್ಯ ಅಶೋಕ್ ರೈ, 'ಸೊಲ್ಮೆಲು' ಎಂದೇ ತುಳು ಭಾಷೆಯಲ್ಲಿ ಮಾತು ಆರಂಭಿಸಿದರು.
Google Translate ಇದೀಗ ತನ್ನ ಅನುವಾದ ಭಾಷಾ ಪಟ್ಟಿಯಲ್ಲಿ 110 ಹೊಸ ಭಾಷೆಗಳನ್ನು Google ನ PalM2 ಸಹಾಯದಿಂದ ಸೇರ್ಪಡೆ ಮಾಡಿದ್ದು, ಅವುಗಳಲ್ಲಿ ಸಂತಾಲಿ, ಮಾರ್ವಾಡಿ ಹಾಗೂ ತುಳು ಭಾಷೆಗಳು ಸೇರಿಕೊಂಡಿವೆ.
ಭಗವದ್ಗೀತೆಯ 18 ಶ್ಲೋಕ ಮತ್ತು ಸಾರವನ್ನು ತುಳು ಲಿಪಿಯಲ್ಲಿ ಮತ್ತು ಕನ್ನಡ ಲಿಪಿಯ ಮೂಲಕ ತುಳುವಿನಲ್ಲಿ ಬರೆಯಲಾಗಿದ್ದು, ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಮಹಿಳೆಯೊಬ್ಬರು ಈ ಸಾಧನೆಯನ್ನು ಮಾಡಿದ್ದಾರೆ.
ಬೆಂಗಳೂರಿನ ತುಳುವೆರೆ ಚಾವಡಿ 25ನೇ ವರ್ಷದ ಬೊಳ್ಳಿ ಪರ್ಬ ಕಾರ್ಯಕ್ರಮದಲ್ಲಿ ತುಳುನಾಡ್ದ ಸಿರಿ ಪ್ರಶಸ್ತಿ ಮತ್ತು ಜೋಕುಲೆ ಉಜ್ಜಾಲ್ ತುಳು ಪದಮಾಲೆ ಪುಸ್ತಕ ಹಾಗೂ ಸತ್ಯಪ್ಪೆ ಬಾಲೆಲು ಆಡಿಯೋ ಬಿಡುಗಡೆ ಮಾಡಿ ಮಾತನಾಡಿದ ಅವರು, ತುಳುಭಾಷೆಯನ್ನು 8ನೇ ಪರಿಚ್ಚೇದಕ್ಕೆ ಸೇರಿಸುವ ವಿಚಾರ ಕೂಡ ಹೋರಾಟದ ಹಾದಿಯಲ್ಲಿದೆ.
ಈ ಕುರಿತಾಗಿ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ “ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧ್ಯಯನ ನಡೆಸಲು ಶಿಕ್ಷಣ ತಜ್ಞ ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದು, ಸಮಿತಿಯು ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.