ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ನಂತರ ವಾರಣಾಸಿಗೆ ಎರಡನೇ ಬಾರಿ ಭೇಟಿ ನೀಡಿದ ಪ್ರಧಾನಿ ಮೋದಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೇಂದ್ರ ಬಜೆಟ್ ಟೀಕಿಸುವವರ ವಿರುದ್ಧ ಟೀಕಾ ಪ್ರಹಾರ ನಡೆಸಿ ಅವರನ್ನು ವೃತ್ತಿ ಪರ ನಿರಾಶಾವಾದಿಗಳು ಎಂದು ಹೇಳಿದರು.
2018-19ರ ಕೊನೆಯ ಬಜೆಟ್ನಲ್ಲಿ ಈ ಎರಡೂ ವಿಮಾನಗಳಿಗೆ ಹಣಕಾಸು ಸಚಿವಾಲಯ ಹಣ ಬಿಡುಗಡೆ ಮಾಡಿತ್ತು. ಅಲ್ಲದೆ, ಕಳೆದ ಬಜೆಟ್ ನಲ್ಲಿ ಈ ವಿಮಾನಗಳ ನಿರ್ವಹಣೆಗಾಗಿ ಕೇಂದ್ರ ಸರ್ಕಾರ ಒಟ್ಟು 4,669 ಕೋಟಿ ರೂ. ವೆಚ್ಚ ಮಾಡಿತ್ತು.
ಹೆಚ್ಚಿನ ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಉದ್ದೇಶದಿಂದ ಮಾಧ್ಯಮ, ವಾಯುಯಾನ, ವಿಮೆ, ಮತ್ತು ಏಕ ಬ್ರಾಂಡ್ ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ಎಫ್ಡಿಐ ಮಾನದಂಡಗಳನ್ನು ಸಡಿಲಿಸುವ ಪ್ರಸ್ತಾಪವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಪ್ರಸ್ತಾಪಿಸಿದ್ದಾರೆ.
ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವ ಕೇಂದ್ರದ ಬಜೆಟ್ ಭರವಸೆಯ ಬಜೆಟ್ ಆಗಿದೆ ಮತ್ತು ಇದು 21 ನೇ ಶತಮಾನದಲ್ಲಿ ಭಾರತದ ಅಭಿವೃದ್ಧಿಯನ್ನು ಹೆಚ್ಚಿಸುವ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ವಾಖ್ಯಾನಿಸಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ಹಲವಾರು ಹೊಸ ಯೋಜನೆಗಳನ್ನು ಘೋಷಿಸಿದರು. 'ಒಂದು ರಾಷ್ಟ್ರ, ಒಂದು ಗ್ರಿಡ್' ಎಂಬ ಯೋಜನೆ ಕೂಡ ಒಂದು ಪ್ರಮುಖ ಘೋಷಣೆಯಾಗಿದೆ.
2019 ರಲ್ಲಿ ಮಹಾತ್ಮ ಗಾಂಧಿಯವರ 150 ನೇ ಜನ್ಮ ದಿನಾಚರಣೆ ಇರುವ ಹಿನ್ನಲೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ವಿಕಿಪೀಡಿಯ ಮಾದರಿಯಲ್ಲಿ ಗಾಂಧಿಪೀಡಿಯ ರಚನೆ ಮಾಡುವುದಾಗಿ ಘೋಷಿಸಿದ್ದಾರೆ.
ನಮ್ಮ ಸರ್ಕಾರ ಯಾವುದೇ ಕಾರ್ಯವನ್ನು ಕೈಗೊಂಡರೂ ಅದರಲ್ಲಿ ಗ್ರಾಮೀಣ ಜನತೆ, ಬಡವರು ಮತ್ತು ರೈತರನ್ನು ಹೆಚ್ಚು ಕೆಂದ್ರೀಕರಿಸಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ರಾಷ್ಟ್ರೀಯ ಸಾರಿಗೆ ಕಾರ್ಡ್ (ಎನ್ಟಿಸಿ) ಘೋಷಿಸಿದರು. ರೈಲು ಮತ್ತು ಬಸ್ನಲ್ಲಿ ಪ್ರಯಾಣಿಸಲು ಈ ಕಾರ್ಡ್ ಅನ್ನು ಬಳಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.