'ಕರ್ನಾಟಕ ಮತ್ತು ಇತರವುಗಳಂತಹ ತಲಾವಾರು GSDP ಹೆಚ್ಚಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಗಾಗಿ ಶಿಕ್ಷೆಯನ್ನು ಅನುಭವಿಸುತ್ತಿವೆ, ಅಸಮಾನವಾಗಿ ಕಡಿಮೆ ತೆರಿಗೆ ಹಂಚಿಕೆಗಳನ್ನು ಪಡೆಯುತ್ತಿವೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಬಡ ಕುಟುಂಬಗಳಿಗೆ ಕಟ್ಟಿಕೊಡುವ ಮನೆ, ವಸತಿ ಸಂಕೀರ್ಣಕ್ಕೆ ಜಿ ಎಸ್ ಟಿ ವಿನಾಯಿತಿ ನೀಡಬೇಕು ಎಂಬ ಮನವಿಗೆ ಬಜೆಟ್ʼನಲ್ಲಿ ಸ್ಪಂದಿಸಿಲ್ಲ. ಬಿಜೆಪಿಗೆ ಬಡವರ ಪರ ಇರುವ ಕಾಳಜಿಗೆ ಇದು ಸಾಕ್ಷಿ ಎಂದು ಹೇಳಿದ್ದಾರೆ.
ಅಪಹರಣಕ್ಕೆ ಒಳಗಾದ ಮಹಿಳೆಯ ಆಡಿಯೋ ವಿಡಿಯೋ ಬಗ್ಗೆ ಕೇಳಿದಾಗ "ಇದಕ್ಕೆ ಎಸ್ಐಟಿ ಉತ್ತರ ನೀಡುತ್ತದೆ. ಇದರ ಬಗ್ಗೆ ನನಗೆ ಏನು ಗೊತ್ತಿಲ್ಲ. ನನ್ನ ಹೆಸರು ಬಳಸಿಕೊಂಡರೆ ಮಾಧ್ಯಮಗಳು ಹಾಕುತ್ತಾರೆ ಎಂದು ಉಪಯೋಗಿಸಿಕೊಳ್ಳುತ್ತಿದ್ದಾರೆ" ಎಂದು ಹೇಳಿದರು.
Union Minister Gajendra Singh Shekhawat: ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ.
ಕರ್ನಾಟಕದ ಬೆಟ್ಟ ಕುರುಬ ಸಮುದಾಯ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೇಂದ್ರ ಸಚಿವ ಸಂಪುಟ ನಿನ್ನೆ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದು, ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ.
ನಗರದ ಪಿಬಿ ರಸ್ತೆಯ ಹಳೆ ಬಸ್ ನಿಲ್ದಾಣದಿಂದ ಬಿಡ್ನಾಳವರೆಗೆ ಮೇಲ್ಸೇತುವೆ ರಸ್ತೆ ನಿರ್ಮಿಸಿ, ಬೆಂಗಳೂರು ಮಾರ್ಗದಲ್ಲಿ ಸುಗಮ ಸಂಚಾರ ಕಲ್ಪಿಸುವ 300 ಕೋಟಿ ರೂ. ಪ್ರಸ್ತಾವನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ರಾಜ್ಯ ಸರ್ಕಾರ 50 ಲಕ್ಷ ರೂ.ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯವನ್ನು (ಇಡಿ) ದೇಶಾದ್ಯಂತ ವಿರೋಧ ಪಕ್ಷಗಳನ್ನು ನಿಗ್ರಹಿಸಲು ಬಳಸುತ್ತಿದೆ ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಶನಿವಾರ ಆರೋಪಿಸಿದ್ದಾರೆ.
ರಾಷ್ಟ್ರೀಯ ಸಂಖ್ಯಾಶಾಸ್ತ್ರೀಯ ಆಯೋಗ (ಎನ್ಎಸ್ಸಿ), ಪಿ ಸಿ ಮೊಹನನ್ ಮತ್ತು ಜೆ ವಿ ಮೀನಾಕ್ಷಿ ಇಬ್ಬರು ಸದಸ್ಯರು ಮಂಗಳವಾರದಂದು ಕೇಂದ್ರ ಸರ್ಕಾರದ ನಿಲುವಿಗೆ ಅಸಮಾಧಾನಗೊಂಡು ರಾಜಿನಾಮೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಮೇಲ್ಜಾತಿಯಲ್ಲಿ ಬಡವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ನೀಡಿರುವ ಶೇ.10 ರಷ್ಟು ಮೀಸಲಾತಿ ಪ್ರಮಾಣವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.