ಇಂದು ಮೂರನೇ ಹಂತದಲ್ಲಿ 16 ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಇದು ಅತ್ಯಂತ ನಿರ್ಣಾಯಕ ಸುತ್ತಿನ ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ನಡೆಯಲಿದೆ.
UP Assembly Elections 2022: ರಾಜಕೀಯವಾಗಿ ಸಾಕಷ್ಟು ಮಹತ್ವ ಹೊಂದಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಫೆಬ್ರವರಿ 10ರಂದು ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ 58 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುದ್ದಿ ವಾಹಿನಿಗಳಲ್ಲಿ ತೋರಿಸಲಾಗುತ್ತಿರುವ ಅಭಿಪ್ರಾಯ ಸಂಗ್ರಹಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಹೇಳಿ ಅವುಗಳನ್ನು ನಿಲ್ಲಿಸುವಂತೆ ಸಮಾಜವಾದಿ ಪಕ್ಷ ಚುನಾವಣಾ ಆಯೋಗವನ್ನು ಒತ್ತಾಯಿಸಿತ್ತು.
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಅಪ್ನಾ ದಳ ಮತ್ತು ನಿಶಾದ್ ಪಕ್ಷವು 403 ಸ್ಥಾನಗಳಲ್ಲಿ ಜಂಟಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜೆಪಿ ನಡ್ಡಾ ಬುಧವಾರದಂದು ಘೋಷಿಸಿದ್ದಾರೆ.
ಗೋರಖ್ಪುರ ನಗರದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಿದೆ. ಮೊದಲ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿರುವ ಸ್ಥಾನಗಳಿಗೆ ಪಕ್ಷವು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಈ ಹಿನ್ನೆಲೆಯಲ್ಲಿ ಚುನಾವಣೆ ಗೆಲ್ಲಲು ಎಲ್ಲ ತಂತ್ರಗಳನ್ನು ಹೆಣೆಯಲು ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಎಲ್ಲ ಚುನಾವಣಾ ಉಸ್ತುವಾರಿಗಳಿಗೆ ಸೂಚನೆ ನೀಡಿದೆ. ಚುನಾವಣಾ ಉಸ್ತುವಾರಿಯಲ್ಲಿರುವ ಪ್ರದೇಶಗಳಲ್ಲಿ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳಿ ತಾತ್ಕಾಲಿಕ ಮನೆ ಬಾಡಿಗೆ ಪಡೆದು ಅಲ್ಲಿಯೇ ಇದ್ದು ಕೆಲಸ ಮಾಡಲು ಪಕ್ಷ ಸೂಚನೆ ನೀಡಿದೆ.
UP Assembly Elections 2022 - ಮಹಿಳೆಯರನ್ನು ರಾಜಕೀಯದ ಮುಖ್ಯವಾಹಿನಿಗೆ ತರುವುದು ತಮ್ಮ ಪ್ರಮುಖ ಉದ್ದೇಶವಾಗಿದ್ದು, ಇದಕ್ಕಾಗಿ ತಮ್ಮ ಪಕ್ಷವು ಈ ಬಾರಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಶೇ.40ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲಾಗುವುದು ಎಂಬ ದೊಡ್ಡ ಘೋಷಣೆಯನ್ನು ಮೊಳಗಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.