Shirur landslide: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ದೋ ಎಂದು ಹರಿಯುತ್ತಿರುವ ಮಳೆ ಭಾರಿ ಅನಾಹುತವನ್ನೆ ಸೃಷ್ಟಿಸಿಬಿಟ್ಟಿದೆ. ಗುಡ್ಡ ಕುಸಿತಕ್ಕೆ ಸಿಲುಕಿ ಹಲವರು ಪ್ರಾಣ ಕಳೆದುಕೊಂಡಿದ್ದರೆ. ಇನ್ನೂ ಕೆಲವರು ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಗುಡ್ಡ ಕುಸಿತ
ಇಂದಿನಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಬಂದ್
ಮಡಿಕೇರಿಯಿಂದ ಸಂಪಾಜೆ ರಸ್ತೆ ಸಂಚಾರವೂ ಬಂದ್
ಕೊಡಗಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಖಾಕಿ
ರಸ್ತೆ ದುರಸ್ತಿ ಆಗೋವರೆಗೂ ವಾಹನಕ್ಕೆ ಎಂಟ್ರಿ ನಿಷೇಧ
ಈ ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ 66 (National Highway 66)ರಲ್ಲಿ ಚತುಷ್ಪಥ ಕಾಮಗಾರಿ ಪಡೆದ ಐ ಆರ್ ಬಿ ಕಂಪನಿ ನೇರ ಕಾರಣ ಎಂದು ಸ್ಥಳೀಯರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಕಂಪನಿಯವರು ಗುಡ್ಡದ ಮಣ್ಣು ತೆಗೆಯುವಾಗ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಿದ್ದರಿಂದ ದೊಡ್ಡ ದುರಂತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ
ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ರಜೆ ಘೋಷಣೆ
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳಲ್ಲಿ ರಜೆ
ಕಾರವಾಡ, ಅಂಕೋಲಾ, ಕುಮಟಾ, ಹೊನ್ನಾವರ,
ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ,
ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನಾದ್ಯಂತ ರಜೆ
ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ
Kali River Tragedy: ಇಬ್ಬರು ಮಹಿಳೆಯರನ್ನು ಹೊರತುಪಡಿಸಿ ಮಕ್ಕಳು ಸೇರಿ ಉಳಿದ ಆರು ಮಂದಿ ಕಾಳಿ ನದಿಯಲ್ಲಿ ಈಜಲು ಇಳಿದಿದ್ದರು. ಈ ವೇಳೆ ಕಾಲು ಜಾರಿ ನದಿಯಲ್ಲಿ ಮುಳುಗಿದ್ದು ನಾಲ್ವರ ಮೃತದೇಹಗಳು ಪತ್ತೆಯಾಗಿವೆ.
Uttara Kannada Gram Panchayat Recruitment 2024: ಉತ್ತರ ಕನ್ನಡ ಗ್ರಾಮ ಪಂಚಾಯ್ತಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.
ಮನೆಯ ಹಿಂಭಾಗದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧದ ತುಂಡುಗಳನ್ನು ಅರಣ್ಯ ಸಂಚಾರಿದಳ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ನಡೆದಿದೆ.
ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಜನರಿಗೆ ಸಿಹಿ ಸುದ್ದಿ ಕೆಎಸ್ಆರ್ಟಿಸಿಯಿಂದ 1200ಕ್ಕೂ ಹೆಚ್ಚುವರಿ ಬಸ್ ವ್ಯವಸ್ಥೆ ಸೆಪ್ಟೆಂಬರ್ 15 ಮತ್ತು 16 ರಂದು ವಿಶೇಷ ಬಸ್ ವ್ಯವಸ್ಥೆ ರಾಜ್ಯದ ಮತ್ತು ಅಂತರ್ ರಾಜ್ಯದ ವಿವಿಧ ಪ್ರದೇಶಕ್ಕೆ ಸೇವೆ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಸ್ಥಳಗಳಿಗೆ ಹೆಚ್ಚುವರಿ ಬಸ್ ಸೇವೆ
ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಸ್ಥಾನ ಗೆದ್ದು ಬೀಗುತ್ತಿರುವ ಕೈ ಪಡೆ ಉತ್ತರಕನ್ನಡ ಲೋಕಸಭಾ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ನಾನಾ ಕಸರತ್ತು ಆರಂಭಿಸಿದೆ. ಕೈ ಪಡೆಯಲ್ಲಿ ರಾಜಕೀಯ ಗರಿಗೆದರಿದ್ರೂ ಕಮಲ ಪಡೆ ಮಾತ್ರ ಕೈ ನಡೆ ನೋಡಿ ನಿರ್ಧರಿಸಲು ಮುಂದಾಗಿದೆ.. ಹೌದು ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷದ ನಾಯಕರು ಈಗ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದಾರೆ.
Crime News: ರಸ್ತೆ ಬದಿ ತೆರಳುತ್ತಿದ್ದ ಗರ್ಭಿಣಿಯನ್ನು ಆಟೋ ರಿಕ್ಷಾ ಬಲಿ ಪೆದುಕೊಂಡಿರುವ ಘಟನೆ ಅಂಕೋಲಾದ ಭಾವಿಕೇರಿ ಗ್ರಾಮದಲ್ಲಿ ನಡೆದಿದೆ. ಅತಿವೇಗವಾಗಿ ಬಂದ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆಯುವ ಹೋಳಿ ನೋಡುಗರಿಗೆ ರಸದೌತಣ ಉಣಿಸುತ್ತೆ... ಬ್ರಿಟಿಷರ ಆಡಳಿತದಿಂದಲೂ ನಡೆದು ಬಂದಿರುವ ಅಂಕೋಲಾ ತಾಲೂಕಿನ ಬೆಳಂಬಾರ ಹಾಲಕ್ಕಿ ಸಮಾಜದ ಸುಗ್ಗಿ ಕುಣಿತಕ್ಕೆ ಬಹು ದೊಡ್ಡ ಇತಿಹಾಸವಿದೆ.
ಬ್ರಿಟಿಷರ ಕಾಲದಿಂದಲೂ ನಡೆದು ಬಂದಿರುವ ಅಂಕೋಲಾ ತಾಲೂಕಿನ ಬೆಳಂಬಾರ ಹಾಲಕ್ಕಿ ಸಮಾಜದ ಸುಗ್ಗಿ ಕುಣಿತಕ್ಕೆ ಬಹು ದೊಡ್ಡ ಇತಿಹಾಸವಿದೆ. ವರ್ಷದಲ್ಲಿ ನಡೆಯುವ ಘಟನೆಗಳನ್ನು ರೂಪಕದಲ್ಲಿ ಜನರಿಗೆ ಮನರಂಜನೆ ಒದಗಿಸುವ ಜೊತೆ ಜೊತೆಗೆ ಸಮಾಜದಲ್ಲಿ ಓರೆ ಕೋರೆಗಳನ್ನು ತಿದ್ದುಕೊಳ್ಳುವಲ್ಲಿಯೂ ಮಾದರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.