ಪ್ರಕರಣದ ದೂರುದಾರ ಕಲ್ಲೇಶ್ ಬಿ ನ್ಯಾಯಾಲಯಕ್ಕೆ ಮೆಮೊ ಸಲ್ಲಿಸಿ ದೂರನ್ನು ಮತ್ತಷ್ಟು ಮುಂದುವರೆಸಲು ಇಚ್ಚಿಸುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ಮುಂದುವರೆಸುವ ಅಗತ್ಯವಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಲೂಟಿ ಮಾಡಿದ ಎರಡು ಹಗರಣಗಳು ಬೆಳಕಿಗೆ ಬಂದಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣ ಬಯಲಿಗೆ ಬಂದಿದೆ. ಸಿದ್ದರಾಮಯ್ಯನವರು ಪತ್ನಿಯ ಹೆಸರಲ್ಲಿ 14 ನಿವೇಶನ ಪಡೆದಿದ್ದರೆ, ಅವರ ಕುಟುಂಬದವರು ನೂರಾರು ಸೈಟುಗಳನ್ನು ಪಡೆದಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದರು.
ನನ್ನ ವಿರುದ್ದ ಮಾಡಿರುವ ಆರೋಪದಲ್ಲಿ ನಾನು ಎಪಿಎಂಸಿ ಸಚಿವನಾಗಿರಲಿಲ್ಲ ಆಗ ಗೃಹ ಸಚಿವನಾಗಿದ್ದೆ, ಎಪಿಎಂಸಿ ಪ್ರಕರಣದಲ್ಲಿ ತನಿಖೆ ನಡೆಸಿ ಬ್ಯಾಂಕಿನವರಿಂದ 48 ಕೋಟಿ ರೂ. ಜೊತೆಗೆ ಬಡ್ಡಿ ಸಮೇತ 52 ಕೋಟಿ ರೂ ವಸೂಲಿ ಮಾಡಲಾಗಿತ್ತು. ಬೋವಿ ನಿಗಮದಲ್ಲಿ ಅವ್ಯವಹಾರ ಆಗಿದ್ದಾಗ ಅದನ್ನು ಸಿಐಡಿ ತನಿಖೆಗೆ ನಾವೇ ವಹಿಸಿದ್ದೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು..
B Nagendra case : ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಹಗರಣದ ಕುರಿತು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ದಳ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಜಾರಿ ನಿರ್ದೇಶನಾಲಯವು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.
ಪರಿಶಿಷ್ಟ ಜಾತಿ, ಪಂಗಡಗಳಿಗೆ ಮೀಸಲಿಟ್ಟ ಹಣವನ್ನು ಲೂಟಿ ಹೊಡೆದು ಲೋಕಸಭಾ ಚುನಾವಣೆಯಲ್ಲಿ ಬಳಸಿಕೊಂಡ ಮಾಹಿತಿ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದೇವೆ. 14 ತಿಂಗಳ ಅವಧಿಯಲ್ಲಿ ಈ ಸರಕಾರ ಮೊದಲ ಬಾರಿಗೆ ಗಂಡಾಂತರಕ್ಕೆ ಸಿಲುಕಿ ಹಾಕಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಬಿ.ವೈ. ವಿಜಯೇಂದ್ರ ಹೇಳಿದರು.
ನಾಗೇಂದ್ರ ಬಂಧನ ಮಾಡಿ, ರಾತ್ರಿ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಲಾಗಿದೆ. ಆ ಬಳಿಕ ಬೆಳಗ್ಗೆ 7 ಗಂಟೆ ವೇಳೆಗೆ ಯಲಹಂಕದಲ್ಲಿರೋ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಧೀಶರಾದ ಸಂತೋಷ್ ಗಜಾನನ ಹೆಗ್ಡೆಯವರ ಮನೆಯಲ್ಲಿ ನಾಗೇಂದ್ರನನ್ನ ಇಡಿ ಹಾಜರುಪಡಿಸಿದೆ. ಆ ಬಳಿಕ ಇಡಿ ಪರವಾಗಿ ಪಿಪಿ ಪ್ರಸನ್ನ ಕುಮಾರ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಲಾಗಿತ್ತು.
Valmiki Corp scam : ಸಿಎಂ, ಡಿಸಿಎಂ ಹೇಳಿಕೆಗಳನ್ನು ನಾನು ಗಮನಿಸಿದೆ. ರಾಜೀನಾಮೆ ನೀಡುವುದಕ್ಕೆ ಸಚಿವರಿಗೆ ನಾನು ಹೇಳಿಲ್ಲ, ನಾನು ಹೇಳಿಲ್ಲ ಎನ್ನುತ್ತಿದ್ದರು. ಇದು ಬರೀ ಡ್ರಾಮಾ ಅಷ್ಟೇ. ಆ ಮಂತ್ರಿಗೆ ರಾಜೀನಾಮೆ ನೀಡಿ ಅನ್ನುವ ಧೈರ್ಯ ಇವರಿಗೆ ಇರಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.