ಮಂಡ್ಯದಲ್ಲಿ ಮೂರನೇ ದಿನದ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ. ಇಂದು ನಾಗಮಂಗಲ ಕ್ಷೇತ್ರದಲ್ಲಿ ನಡೆಯುತ್ತಿರುವ ಬಿಜೆಪಿ ಯಾತ್ರೆ. ಬಿಜೆಪಿ ಮುಖಂಡ ಫೈಟರ್ ರವಿ ನೇತೃತ್ವದಲ್ಲಿ ನಡೆಯುತ್ತಿರುವ ಯಾತ್ರೆ. ಸೌಮ್ಯಕೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ ವಿಜಯಯಾತ್ರೆಗೆ ಚಾಲನೆ. ಮೆರವಣಿಗೆಯಲ್ಲಿ ಜಾನಪದ ಕಲಾ ತಂಡಗಳು ಸೇರಿ ನೂರಾರು ಜನ ಭಾಗಿ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಚಿವರಾದ ಗೋಪಾಲಯ್ಯ, ಅಂಗಾರಾ, ಅರಗ ಜ್ಣಾನೇಂದ್ರ, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿ ಹಲವರು ಭಾಗಿ.
ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.. ಅಮಿತ್ ಶಾ, ಮೋದಿ ಬಳಿಕ ಇಂದು ಕೇಂದ್ರ ರಕ್ಷಣಾ ಸಚಿವ ಎಂಟ್ರಿ ನೀಡುತ್ತಿದ್ದಾರೆ. ಇಂದು ಬೆಳಗಾವಿಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಲಿದ್ದಾರೆ.
ಇಂದಿನಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭ ಹಿನ್ನೆಲೆ ರಥಗಳಿಗೆ ಬಿಜೆಪಿ ನಾಯಕರಿಂದ ಪೂಜೆ. ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ವಿಶೇಷ ಪೂಜೆ. ಇಂದು ಚಾಮರಾಜನಗರದಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭ. ಮಲೆ ಮಹದೇಶ್ವರ ಬೆಟ್ಟದಿಂದ ಆರಂಭಗೊಳ್ಳಲಿರುವ ಯಾತ್ರೆ.
ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೇ ಆಕ್ಟಿವ್ ಆಗಿರುವ ಬಿಜೆಪಿ ಇಂದಿನಿಂದ (ಮಾ.1) ವಿಜಯ ಸಂಕಲ್ಪ ಯಾತ್ರೆ ನಡೆಸಲು ಸಜ್ಜಾಗಿದೆ. ಪ್ರಮುಖ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.