ವಕ್ಫ್ ಆಸ್ತಿಗಳನ್ನು ತೆರವುಗೊಳಿಸಿ ಕೊಡುವ ಭರವಸೆಯನ್ನು ನೀಡಿ, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ, ಅತಿಕ್ರಮಣ ಮಾಡಿಕೊಂಡಿರುವವರಿಗೆ ನೋಟೀಸುಗಳನ್ನೂ ನೀಡಿದ್ದರು. ಬಿಜೆಪಿಯವರು ರಾಜಕೀಯ ಇಬ್ಬಂದಿತನವನ್ನು ಇಬ್ಬದಿನೀತಿಯನ್ನು ಪಾಲಿಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಕ್ಫ್ ವಿಚಾರದಲ್ಲಿ ರೈತರ ತೀವ್ರ ವಿರೋಧ ಎದುರಿಸಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.. ನ್ಯಾಯಾಂಗ ನಿಂದನೆ ಆರೋಪದ ಮೇಲೆ ಜಮೀರ್ ಅಹ್ಮದ್ಖಾನ್ ವಿರುದ್ದ ಕ್ರಮ ಕೈಗೊಳ್ಳುವಂತೆ ರಾಜಭವನದಿಂದ ಅಡ್ವೊಕೇಟ್ ಜನರಲ್ಗೆ ಪತ್ರ ಬರೆಯಲಾಗಿದೆ. ರಾಜ್ಯಪಾಲರ ಪತ್ರದಿಂದ ಈಗ ಜಮೀರ್ ಟ್ರಬಲ್ನಲ್ಲಿ ಸಿಕ್ಕಿಕೊಂಡಿದ್ದಾರೆ. ಅಷ್ಟಕ್ಕೂ ಜಮೀರ್ಗೆ ಸಂಕಷ್ಟಕ್ಕೆ ಸಿಲುಕಿಸಿದ ಪ್ರಕರಣ ಯಾವುದು..? ಇಲ್ಲಿದೆ ನೋಡಿ..
ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರಿಂದ ಮಾಡಲು ಆಗಲಿಲ್ಲ. ಅಕ್ಕ-ತಂಗಿ, ತಂದೆ-ಮಗ, ಅಪ್ಪ-ಮಕ್ಕಳ ನಡುವೆ ಜಗಳ ತಂದಿಟ್ಟು, ಭಾವನೆಗಳ ಮೇಲೆ ಆಟವಾಡುವುದೇ ಅವುಗಳ ಕೆಲಸ ಎಂದು ರಾಜ್ಯ ಬಿಜೆಪಿ ವಿರುದ್ಧ ಡಿಸಿಎಂ ಗುಡುಗಿದರು..
ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ. ಅದನ್ನು ಹೇಳಿಕೊಂಡೆ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ ಅಂಬೇಡ್ಕರ್ ಹೇಳಿ ಕೊಟ್ಟಂತೆ ಬದುಕುವವರು ನಾವು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಡುಗಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.