ಭಾರತದ ಮಾಜಿ ಬ್ಯಾಟ್ಸ್ಮನ್ ಮನೋಜ್ ತಿವಾರಿ ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ ತೃಣಮೂಲ ಕಾಂಗ್ರೆಸ್ ಸೇರಿದ್ದರು. ಶಿಬಪುರ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮನೋಜ್ ತಿವಾರಿ, ಬಿಜೆಪಿಯ ರತಿನ್ ಚಕ್ರವರ್ತಿ ವಿರುದ್ಧ 32 ಸಾವಿರಕ್ಕೂ ಅಧಿಕ ಮತಗಳಿಂದ ಜಯ ಗಳಿಸಿದ್ದಾರೆ.
ಹಿಂಸಾಚಾರದ ಬಗ್ಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖಡ್, ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತನಾಡಿದ್ದಾರೆ. ಹಿಂಸಾಚಾರದ ಬಗ್ಗೆ ಗಂಭೀರ ಚಿಂತೆ ವ್ಯಕ್ತ ಪಡಿಸಿದ್ದಾರೆ. ನಾನು ಕೂಡಾ ಅವರೊಂದಿಗೆ ತನ್ನ ಆತಂಕ, ನೋವು ಹಂಚಿಕೊಂಡಿದ್ದೇನೆ. ಬಂಗಾಳದಲ್ಲಿ ಹಿಂಸಾಚಾರ, ದಾಂಧಲೆ, ಲೂಟಿ, ಬೆಂಕಿ ಹಚ್ಚುವುದು ಹತ್ಯೆ ಇತ್ಯಾದಿ ನಿರಾತಂಕವಾಗಿ ಮುಂದುವರಿದಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿಯನ್ನು ದಾಟಿದರೆ ಎಲೆಕ್ಷನ್ ಮ್ಯಾನೇಜ್ ಮೆಂಟ್ ವೃತ್ತಿಯಿಂದ ನಿವೃತ್ತಿ ಹೊಂದುವುದಾಗಿ ಪ್ರಶಾಂತ್ ಕಿಶೋರ್ ಹೇಳಿದ್ದರು. ಅವರ ಹೇಳಿಕೆ ಪ್ರಕಾರವೇ ಬಿಜೆಪಿ ರಾಜ್ಯದಲ್ಲಿ ಎರಡಂಕಿಯನ್ನು ದಾಟಿಲ್ಲ.
ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ ಮಮತಾ ಬ್ಯಾನರ್ಜಿಗೆ ಅಭಿನಂದಿಸಿದ್ದಾರೆ. ಭರ್ಜರಿ ಗೆಲುವು ಸಾಧಿಸಿದ್ದಕ್ಕಾಗಿ ಶುಭ ಕೋರಿದ್ದಾರೆ. ಇದೇ ವೇಳೆ ಪಶ್ಚಿಮ ಬಂಗಾಳದ ಜನತೆಗೂ ಅಭಿನಂದನೆ ಸಲ್ಲಿಸಿದ್ದಾರೆ.
ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ 5 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಇಂದು ಸಂಜೆ ಪ್ರಕಟಿಸುವ ಸಾಧ್ಯತೆಯಿದೆ. ಚುನಾವಣಾ ಆಯೋಗ ಸಂಜೆ 4: 30 ಕ್ಕೆ ಸುದ್ದಿಗೋಷ್ಟಿ ನಡೆಸಲಿದೆ.
ರೋಜ್ವಾಲಿ ಚಿಟ್ ಫಂಡ್ನ ಆರೋಪದ ಮೇಲೆ ಮಂಗಳವಾರ ಕೆಡಿ ಸಿಂಗ್ ಅವರನ್ನು ಸುಮಾರು ಆರೂವರೆ ಗಂಟೆಗಳ ಕಾಲ ಇಡಿ ಪ್ರಶ್ನಿಸಲಾಗಿತ್ತು. ಈ ವಿಚಾರಣೆಯಲ್ಲಿ, ಇಡಿ ಅವರ ಕಡೆಯಿಂದ ಸರಿಯಾದ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಇಡಿ ಅಧಿಕಾರಿಗಳ ಮೂಲದಿಂದ ತಿಳಿದುಬಂದಿದೆ.
ಮುಂದಿನ ವರ್ಷ ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿ ಅವರ ಹೊಸ ಅಭಿಯಾನ 'ಬಾಂಗ್ಲರ್ ಗೋರ್ಬೊ ಮಮತಾ' ಹೆಸರಿನಲ್ಲಿ ರೂಪಿಸಲಾಗಿದೆ.ಈ ತಂತ್ರವನ್ನು ಚುನಾವಣಾ ಚಾಣಾಕ್ಯ ಎಂದೇ ಬಿಂಬಿತವಾಗಿರುವ ಪ್ರಶಾಂತ್ ಕಿಶೋರ್ ರೂಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.