Dinesh Gundu Rao: ಆರೋಗ್ಯ ಇಲಾಖೆ ಕುರಿತು ಬಿಜೆಪಿ ಶಾಸಕ ಅಶ್ವತ್ ನಾರಾಯಣ್ ಬರೀ ಸುಳ್ಳುಗಳನ್ನ ಹೇಳಿ ಜನರಿಗೆ ತಪ್ಪು ಮಾಹಿತಿ ನೀಡುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುವರ್ಣ ವಿಧಾನ ಸೌಧದ ಮುಂಭಾಗ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿ ಧರಣಿ ನಡೆಸುತ್ತಿದ್ದರು.
ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡುತ್ತದೆ. ವರದಿ, ಶಿಫಾರಸ್ಸುಗಳಿಗೆ ಸಂಬಂಧಿಸಿದಂತೆ ರಾಜ್ಯಗಳ ಅಭಿಪ್ರಾಯ ಪಡೆದು, ನಂತರ ಉತ್ಪಾದನಾ ವೆಚ್ಚದ ಮೇಲೆ ಶೇ.50 ರಷ್ಟು ಸೇರಿಸಿ ಬೆಂಬಲ ಬೆಲೆಯನ್ನು ನಿಗದಿಪಡಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ.
ಇಂದಿನಿಂದ ನಡೆಯೋ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ, ಜೆಡಿಎಸ್ ನಾಯಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇತ್ತ ಸರ್ಕಾರ ಕೂಡಾ ಬಿಜೆಪಿ ಅವಧಿಯ ಹಗರಣಗಳ ತನಿಖೆಯನ್ನು ಮುಂದಿಟ್ಟು ಕೌಂಟರ್ ಕೊಡಲು ಪ್ಲ್ಯಾನ್ ಮಾಡಿಕೊಂಡಿದೆ... ಉಪ ಚುನಾವಣೆ ಗೆಲುವನ್ನು ಮುಂದಿಟ್ಟು ಕಮಲ-ದಳಕ್ಕೆ ಟಕ್ಕರ್ ಕೊಡಲು ಯೋಜನೆ ಹಾಕಿಕೊಂಡಿದ್ದಾರೆ...
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ-ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಪರಿಶೀಲನಾ ಸಭೆ. ಸರಣಿ ಸಭೆಗಳ ಮೂಲಕ ಪ್ರಗತಿ ಪರಿಶೀಲನೆ ನಡೆಸಲಿರುವ ಸಿಎಂ . ಇಡೀ ದಿನ ಸಭೆಗಳನ್ನು ನಡೆಸಲಿರುವ ಸಿಎಂ ಸಿದ್ದರಾಮಯ್ಯ
ಅದಾನಿ ಹಗರಣ ಹಾಗೂಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಬಿಕ್ಕಟ್ಟಿಗೆ ಒಳಗಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಕಲಾಪಗಳು ಇಂದಿನಿಂದ ಸುಗಮವಾಗಿ ಆರಂಭವಾಗುವ ನಿರೀಕ್ಷೆ ಇದೆ. ಸಭಾಧ್ಯಕ್ಷರೊಂದಿಗಿನ ಸರ್ವಪಕ್ಷ ಸಭೆಯ ಬಳಿಕ ಈ ಮಹತ್ವದ ಬೆಳವಣಿಗೆ ನಡೆದಿದೆ.'ಡಿ.13 ಮತ್ತು 14ರಂದು ಲೋಕಸಭೆಯಲ್ಲಿ ಮತ್ತು 16 ಮತ್ತು 17ರಂದು ರಾಜ್ಯ ಸಭೆಯಲ್ಲಿ ವಿಧಾನದ ಮೇಲಿನ ಚರ್ಚೆಗೆ ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷಗಳು ಒಪ್ಪಿಕೊಂಡಿವೆ.
ವಿಪಕ್ಷ ನಾಯಕ ಅಶೋಕ್ ನೇತೃತ್ವದಲ್ಲಿ ಇಂದು ಸಭೆ
ಬೆಳಗಾವಿ ಅಧಿವೇಶನದಲ್ಲಿ ಗುಡುಗಲು ನಡೆದಿದೆ ಪ್ಲಾನ್
ಉತ್ತರ ಕರ್ನಾಟಕ ಭಾಗದ ಬಿಜೆಪಿ ಶಾಸಕರ ಜೊತೆ ಚರ್ಚೆ
ಮಧ್ಯಾಹ್ನ 1.30ಕ್ಕೆ ಸಭೆ ಕರೆದ ಆರ್.ಅಶೋಕ್
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ. ಇಂದಿನಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ. ಚಳಿಗಾಲ ಅಧಿವೇಶನದಲ್ಲಿ ಐದು ಹೊಸ ಶಾಸನಗಳು ಸೇರಿದಂತೆ 15 ಮಸೂದೆಗಳನ್ನು ಮೋದಿ ಸರಕಾರ ಮಂಡಿಸಲಿದೆ.
ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ
ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿರುವ ಸಭೆ
ಜಾತಿ ಜನಗಣತಿ ವರದಿ ಸಂಪುಟದ ಮುಂದೆ ಮಂಡನೆ ಸಾಧ್ಯತೆ
ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವರದಿ ಒಳಗೊಂಡ ಸಮೀಕ್ಷೆ
ಉಪಚುನಾವಣೆ ಹಿನ್ನೆಲೆ ವರದಿ ಅನುಷ್ಠಾನ ಜಾರಿ ಮುಂದೂಡಿಕೆ
ಸಚಿವ ಸಂಪುಟದ ಮುಂದೆ 22 ವಿಷಯಗಳಿಗೆ ಅನುಮೋದನೆ ಸಾಧ್ಯತೆ
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿ ಸಾಧ್ಯತೆ
ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮದ ರೂಪುರೇಷ ನಿರ್ಧಾರ
ಬೆಳಗಾವಿಯಲ್ಲಿ ನಡೆಯಲಿರುವ ಶತಮಾನೋತ್ಸವ ಕಾರ್ಯಕ್ರಮ
ಗಾಂಧಿ ಭೇಟಿ ನೀಡಿದ ಸ್ಥಳಗಳನ್ನು ಸ್ಮಾರಕಗಳಾಗಿ ನಿರ್ಮಾಣಕ್ಕೆ ನಿರ್ಧಾರ
ಕರ್ನಾಟಕ ಪ್ರವಾಸೋದ್ಯಮ ನೀತಿ 2024ಕ್ಕೆ ಅನುಮೋದನೆ ಸಾಧ್ಯತೆ
ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪಿಸಲು ಅನುಮೋದನೆ ಸಾಧ್ಯತೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.