ಅಯೋಧ್ಯೆ ವಿವಾದವನ್ನು 24 ಗಂಟೆಯಲ್ಲಿ ಬಗೆ ಹರಿಸಬಹುದು ಎಂದು ಶನಿವಾರದಂದು ಹೇಳಿಕೆ ನೀಡಿದ್ದ ಸಿಎಂ ಯೋಗಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ " ಜನರು ಈಗ 90 ದಿನಗಳ ಕಾಲಾವಕಾಶವನ್ನು ನೀಡಿದ್ದಾರೆ,ಆದ್ದರಿಂದ ದನಕರುಗಳಿಂದ ಬೆಳೆಗಳನ್ನು ರಕ್ಷಿಸುವ ಕೆಲಸ ಮಾಡಲಿ" ಎಂದು ಸವಾಲು ಹಾಕಿದ್ದಾರೆ.
ಅಯೋಧ್ಯೆ ವಿವಾದ ವಿಚಾರವಾಗಿ ಶನಿವಾರದಂದು ಪ್ರತಿಕ್ರಿಯಿಸಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ "ಈ ವಿವಾದವನ್ನು 24 ಗಂಟೆಯಲ್ಲಿ ಬಗೆ ಹರಿಸಬಹುದು" ಎಂದು ಅಭಿಪ್ರಾಯಪಟ್ಟಿದ್ದಾರೆ.
ಬುಲಂದ್ ಶಹರ್ ಹಿಂಸಾಚಾರದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಯನ್ನು ಅವರು ಆಕಸ್ಮಿಕ ಎಂದು ಕರೆದಿದ್ದಾರೆ.ಅಲ್ಲದೆ ಈ ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರು ಸಹಿತ ಅಂತವರ ಮೇಲೆ ಶಿಸ್ತು ಕ್ರಮ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಅಲ್ಲದೆ ಈ ಘಟನೆ ಜನ ಸಮೂಹ ಹತ್ಯೆಗೆ ಸಂಬಂಧಿಸಿದ್ದಲ್ಲ ಎಂದು ಸ್ಪಷ್ಟಪಡಿಸಿದರು.
ದೇವರು ಸಂವಿಧಾನಕ್ಕಿಂತ ದೊಡ್ಡವನು ಆದ್ದರಿಂದ ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಯಾವುದೇ ವಿಳಂಬವಿಲ್ಲ ಎಂದು ಬಲ್ಲಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದರು.
ಫೈಝಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದ ನಂತರ ಈಗ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಇಡೀ ಜಿಲ್ಲೆಯಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಕ್ಕೆ ಮುಂದಾಗಿದೆ.ಜಿಲ್ಲೆಯಲ್ಲಿ ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸುವ ಬೇಡಿಕೆ ಸ್ಥಳೀಯರಿಂದ ಬಂದಿರುವ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದು ಬಂದಿದೆ.
ಹಲವು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವು ಹೆಸರುಗಳ ಮರುನಾಮಕರಣಕ್ಕೆ ಮುಂದಾಗಿರುವ ಕ್ರಮದ ಬಗ್ಗೆ ಕಿಡಿಕಾರಿರುವ ಇತಿಹಾಸಕಾರ ಇರ್ಫಾನ್ ಹಬೀಬ್ "ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೆಸರು ಪರ್ಷಿಯಾ ಮೂಲದ್ದು ಆದ್ದರಿಂದ ಬಿಜೆಪಿ ಮೊದಲು ಅದನ್ನು ಬದಲಾಯಿಸಬೇಕೆಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಸರಕಾರದ ನಗರಗಳ ಮರುನಾಮಕರಣ ರಾಜಕೀಯ ಮುಂದುವರೆದಿದೆ ಆದರ ಭಾಗವಾಗಿ ಈಗ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದ್ದಾರೆ.
ದೀಪಾವಳಿಯ ಸಂದರ್ಭದಲ್ಲಿ ಅಯೋಧ್ಯೆಗಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೆಲವು ಪ್ರಮುಖ ಘೋಷಣೆಗಳನ್ನು ನೀಡಬಹುದೆಂದು ಉತ್ತರ ಪ್ರದೇಶದ ಬಿಜೆಪಿಯ ಅಧ್ಯಕ್ಷ ಮಹೇಂದ್ರ ನಾಥ್ ಪಾಂಡೆ ತಿಳಿಸಿದ್ದಾರೆ.
ರಾಮಮಂದಿರ ವಿವಾದವನ್ನು ಬೇಗನೆ ಇತ್ಯರ್ಥಗೊಳಿಸಬೇಕು, ಒಂದು ವೇಳೆ ಈ ಪ್ರಕರಣದಲ್ಲಿ ನ್ಯಾಯ ವಿಳಂಬವಾದಲ್ಲಿ ಅದು ಅನ್ಯಾಯವೆಸಗಿದಂತೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಭಿಪ್ರಾಯಪಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.