ರಾಷ್ಟ್ರೀಯ ಪಕ್ಷಗಳೆರಡೂ(National Parties) ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ‘ವಿಕೃತ ಕೇಕೆʼ ಹಾಕುತ್ತಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಅಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಹಿಂದುಪರ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂದಂಭ ಎಚ್ಡಿಕೆ ಸರಣಿ ಟ್ವೀಟ್ ಮಾಡಿದ್ದಾರೆ.
ಮೊದಲು ಪ್ರಚೋದನಕಾರಿಯಾಗಿ ಹೇಳಿಕೆ ನೀಡುತ್ತಿರುವ ಸಚಿವ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಅವರನ್ನು ವಜಾ ಮಾಡಿದರೆ ಪರಿಸ್ಥಿತಿ ಸಹಜಸ್ಥಿತಿಗೆ ಬರುತ್ತದೆ ಎಂದು ಅವರು ಹೇಳಿದ್ದಾರೆ.
ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದು ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದು ಹೇಳುತ್ತಿದ್ದಾರೆ. ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ? ಅಂತಾ ಎಚ್ ಡಿಕೆ ಪ್ರಶ್ನಿಸಿದ್ದಾರೆ.
ಪೊಲೀಸರು ಅಪರಾಧಿಗಳನ್ನು ಮೊದಲು ಬಂಧಿಸಿ ಕೂಲಂಕುಷವಾಗಿ ತನಿಖೆ ಮಾಡಲಿ. ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಶಿಕ್ಷೆಗೆ ಒಳಪಡಿಸಲಿ ಅಂತಾ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.