Andhra Assembly Elections 2024: ವಿಧಾನಸಭಾ ಚುನಾವಣೆಯಲ್ಲಿ ಸೋತ ಕಾರಣಕ್ಕೆ ತಮ್ಮ ಪಕ್ಷವನ್ನು ಮರೆಯಬಾರದು ಅಂತಾ ಶುಕ್ರವಾರ ಹೈದರಾಬಾದ್ನಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಹೇಳಿದ್ದರು. ನಾವು ಸಂಸತ್ತಿನಲ್ಲಿ ಇನ್ನೂ 15 ಸಂಸದರನ್ನು ಹೊಂದಿದ್ದೇವೆ ಎಂದು ಅವರು ಇದೇ ವೇಳೆ ನೆನಪಿಸಿದ್ದರು.
ಅಚ್ಚುತಪುರಂ ಪ್ರದೇಶದಲ್ಲಿನ ವಿಶೇಷ ಆರ್ಥಿಕ ವಲಯದ (SEZ) ಪಕ್ಕದ ಸಂಸ್ಥೆಯ ಸಿಬ್ಬಂದಿ ಮೇಲೆ ಪರಿಣಾಮ ಬೀರಿದೆ. ಅಸ್ವಸ್ಥವಾಗಿರುವ ಮಹಿಳೆಯರಿಗೆ ವಾಂತಿ, ತಲೆನೋವು ಮತ್ತು ಕಣ್ಣುರಿ ಕಾಣಿಸಿಕೊಂಡ ಪರಿಣಾಮ ಎಲ್ಲ ನೌಕರರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರಪ್ರದೇಶದ ಕ್ಯಾಬಿನೆಟ್ನಲ್ಲಿರುವ ಎಲ್ಲಾ 24 ಸಚಿವರು ಗುರುವಾರದಂದು (ಏಪ್ರಿಲ್ 7) ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
2009ರಲ್ಲಿ ಅಂದಿನ ಆಂಧ್ರಪ್ರದೇಶದ ಸಿಎಂ ಆಗಿದ್ದ ವೈ.ಎಸ್.ರಾಜಶೇಖರ್ ರೆಡ್ಡಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರು. ಆಗ ರೋಸಯ್ಯನವರು 2009ರ ಸೆ.3ರಿಂದ 2010ರ ನ.24ರವರೆಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ವೈ.ಎಸ್.ಶರ್ಮಿಳಾ ರೆಡ್ಡಿ ಅವರು ತಮ್ಮ ತಂದೆಯ ಜನ್ಮ ದಿನಾಚರಣೆಯಂದು ತೆಲಂಗಾಣದಲ್ಲಿ ತಮ್ಮ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.
ಹೊಸ ವ್ಯವಸ್ಥೆಯಲ್ಲಿ, 1, 3,5,7 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳು ಒಂದು ದಿನ ಮತ್ತು 2, 4, 6 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳು ಒಂದು ದಿನ ಶಾಲೆಗೆ ಬರುವಂತೆ ವ್ಯವಸ್ಥೆ ಮಾಡಲಾಗುತ್ತಿದೆ.
ಆಂಧ್ರಪ್ರದೇಶದ ಶಾಲೆಗಳು ನವೆಂಬರ್ 2 ರಿಂದ ಮತ್ತೆ ತೆರೆಯಲು ಸಜ್ಜಾಗಿದೆ.ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ವಿವರವಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕಿಸಾನ್ ರೈಲು ಚಲಾಯಿಸುವುದಾಗಿ ಭರವಸೆ ನೀಡಿದರು. ಅದು ಈಗ ನಿಜವಾಗುತ್ತಿದೆ. ದಕ್ಷಿಣ ಭಾರತದಿಂದ ದೇಶದ ಎರಡನೇ ಮತ್ತು ದಕ್ಷಿಣ ಭಾರತದ ಮೊದಲ ಕಿಸಾನ್ ರೈಲು ಪ್ರಾರಂಭವಾಗಿದೆ.
ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ತೆರೆಯಲು ಆಂಧ್ರಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಸಹ ಮಾಡುತ್ತಿದೆ. ಆದರೆ ಆ ಸಂದರ್ಭ ಕರೋನಾ ಪರಿಸ್ಥಿತಿಯನ್ನು ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ವಿರುದ್ಧ ಭಾರತದ ಇತರ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಮಂಗಳವಾರದಂದು ತಮ್ಮ ಸರ್ಕಾರ ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಎನ್ಪಿಆರ್ ವಿರುದ್ಧ ನಿರ್ಣಯ ಅಂಗೀಕಾರ ಮಾಡಲಿದೆ ಎಂದು ತಿಳಿಸಿದ್ದಾರೆ
ಸರ್ಕಾರಿ ಇಲಾಖೆಗಳಲ್ಲಿ ನೇಮಕಾತಿಗಾಗಿ ಲಿಖಿತ ಪರೀಕ್ಷೆಗಳನ್ನು ಮಾತ್ರ ನಡೆಸುವಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಶುಕ್ರವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.