ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಗೆ ಪಕ್ಷದ ಕೇಂದ್ರ ಚುನಾವಣಾ ಸಮಿತಿ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ ಎಂದು ಬಿಜೆಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಸ್ತುತ, ಈ ನಿಯಮವನ್ನು ನವೆಂಬರ್ 7 ರಿಂದ ಒಂದು ವರ್ಷ ಜಾರಿಗೆ ತರಲಾಗಿದೆ. ಇದರ ಪರಿಣಾಮವನ್ನು ಪರಿಶೀಲಿಸಿದ ಬಳಿಕ ನಿಷೇಧವನ್ನು ಮುಂದುವರಿಸುವ ಬಗ್ಗೆ ಪರಿಗಣಿಸಲಾಗುತ್ತದೆ ಎನ್ನಲಾಗಿದೆ.
ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಇತರ ಗಣ್ಯರು ಕುಳಿತಿದ್ದ ಮುಖ್ಯ ವೇದಿಕೆಯಲ್ಲಿ ನನಗೆ ಸ್ಥಾನ ನೀಡದೆ ಅವಮಾನ ಮಾಡಿದ್ದಲ್ಲದೆ, ಯಾವುದೋ ಮೂಲೆಯಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು ಎಂದು ರಾಜ್ಯಪಾಲ ಜಗದೀಪ್ ಧಂಖರ್ ಹೇಳಿದ್ದಾರೆ.
ಸೋಮವಾರ ತಡರಾತ್ರಿ ಮೊಂಡಾಲ್ ಅವರು ತಮ್ಮ ಮಗಳ ಮನೆಯಿಂದ ಹಿಂತಿರುಗುತ್ತಿದ್ದ ಸಮಯದಲ್ಲಿ ದಾಳಿ ನಡೆಸಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರದ ಮತ್ತೊಂದು ಘಟನೆಯಲ್ಲಿ, 55 ವರ್ಷದ ಸ್ಥಳೀಯ ಬಿಜೆಪಿ ನಾಯಕನನ್ನು ರಾಜ್ಯದ ನಾಡಿಯಾ ಜಿಲ್ಲೆಯಲ್ಲಿ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.
ಕೊಲೆಯಾದ ವ್ಯಕ್ತಿಯನ್ನು ಬೊಂಧು ಪ್ರಕಾಶ್ ಪಲ್ ಎಂದು ಗುರುತಿಸಲಾಗಿದ್ದು, ಆತ ಆರ್ಎಸ್ಎಸ್ ಕಾರ್ಯಕರ್ತ ಎನ್ನಲಾಗಿದೆ. ವೃತ್ತಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಿಕೊಂಡಿದ್ದ ಪ್ರಕಾಶ್, ಆರ್ಎಸ್ಎಸ್ ನಲ್ಲಿಯೂ ಗುರುತಿಸಿಕೊಂಡಿದ್ದರು.
ಕೊಲ್ಕತ್ತಾದಲ್ಲಿ ಇಂದು ಅಮಿತ್ ಶಾ ಮಮತಾ ಬ್ಯಾನರ್ಜೀ ಅವರು ಮತಕ್ಕಾಗಿ ನುಸುಳುಕೋರರನ್ನು ರಾಜ್ಯದಲ್ಲಿ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಪಶ್ಚಿಮ ಬಂಗಾಳದಲ್ಲಿ ಒಡೆದಾಳುವ ರಾಜಕಾರಣ ನಡೆಯಲ್ಲ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ನಂತರ ಬಂಗಾಳಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎನ್ಆರ್ಸಿ ಬಗ್ಗೆ ಭೀತಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
2018 ರಲ್ಲಿ ಅಂದರೆ ಕಳೆದ ವರ್ಷ ಇದೇ ರೀತಿಯ ಆದೇಶವನ್ನು ನೀಡಲಾಯಿತು ಮತ್ತು ಈ ವರ್ಷ ಮತ್ತೆ ಟಾಲಿವುಡ್ ಚಲನಚಿತ್ರಗಳ ಪ್ರಚಾರಕ್ಕಾಗಿ ಮತ್ತು ಅವರ ವ್ಯವಹಾರವನ್ನು ಉತ್ತಮವಾಗಿಡಲು ಇಂತಹ ನೋಟಿಸ್ ನೀಡಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಎನ್ಆರ್ಸಿ ಜಾರಿಗೆ ಬರುವುದಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪದೇ ಪದೇ ಭರವಸೆ ನೀಡುತ್ತಿರುವ ಮಧ್ಯೆ, ಈಗ ಅಲ್ಲಿಯೂ ಕೂಡ ಎನ್ಆರ್ಸಿ ಜಾರಿಗೆ ತರಲಾಗುವುದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಕೈಲಾಶ್ ವಿಜಯವರ್ಗಿಯಾ ಬುಧವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರದಂದು ಬಂಗಾಳದ ಜನರಿಗೆ ತಮ್ಮ ಮೇಲೆ ನಂಬಿಕೆ ಇಡುವಂತೆ ಮನವಿ ಕೊಂಡಿದ್ದಾರೆ. ಎಸ್ಆರ್ಸಿ ವಿಚಾರವಾಗಿ ಮಾತನಾಡಿದ ಅವರು ಅದನ್ನು ಪಶ್ಚಿಮ ಬಂಗಾಳದಲ್ಲಿ ಅನುಮತಿಸುವುದಿಲ್ಲ ಎಂದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರೊಂದಿಗಿನ ಸಭೆಯಲ್ಲಿ ನಾಗರಿಕರ ನೋಂದಣಿ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎನ್ಆರ್ಸಿ ಜಾರಿಗೆ ಬರಲಿದೆ. ಆದಾಗ್ಯೂ ಮಮತಾ ತಮ್ಮ ಮತ ಬ್ಯಾಂಕ್ ಉಳಿಸಿಕೊಳ್ಳಲು ಬಾಂಗ್ಲಾದೇಶಿಗರನ್ನು ರಕ್ಷಿಸಲು ಬಯಸಿದರೆ ಅವರು ಬಾಂಗ್ಲಾದೇಶದ ಪ್ರಧಾನಿಯಾಗುವುದು ಉತ್ತಮ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಟೀಕಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ದೀರ್ಘಕಾಲದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ 75 ವರ್ಷದ ಭಟ್ಟಾಚಾರ್ಯ ಅವರನ್ನು ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಯ ಐಸಿಸಿಯು ಘಟಕಕ್ಕೆ ದಾಖಲಿಸಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಈ ಮಾಸ್ಟರ್ ಪ್ಲಾನ್ ಮಾಡಿದ್ದು, ಪಕ್ಷ ಬಲವರ್ಧನೆಗಾಗಿ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಲು ದುರ್ಗಾ ಪೂಜಾ ಸ್ಪರ್ಧೆಯನ್ನು ಆಯೋಜಿಸಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರದಂದು ನೇತಾಜಿ ಸುಭಾಸ್ ಚಂದ್ರ ಬೋಸ್ಗೆ ಏನಾಯಿತು ಎಂದು ತಿಳಿಯುವ ಹಕ್ಕಿದೆ ಎಂದು ಪ್ರತಿಪಾದಿಸಿದರು. 74 ವರ್ಷಗಳ ಹಿಂದೆ ನಾಪತ್ತೆಯಾದ ದಿನದಂದು ಮಣ್ಣಿನ ಮಗ ಸುಭಾಶ್ ಚಂದ್ರಬೋಸ್ ಅವರನ್ನು ಸ್ಮರಿಸುತ್ತಾ ಮಮತಾ ಬ್ಯಾನರ್ಜೀ ಹೇಳಿದರು.
ವಿವಾಹ ಕಾರ್ಯಕ್ರಮಕ್ಕೆ ತೆರಳಲು ಆಗಮಿಸುತ್ತಿದ್ದ ಇತರ ವಾಹನಗಳಿಗಾಗಿ ಕಾಯುತ್ತಿದ್ದ ಎಸ್ಯುವಿಯನ್ನು ಕಲಿಯಾಚಕ್ನ ರಾಷ್ಟ್ರೀಯ ಹೆದ್ದಾರಿ 34 ಎ ಬದಿಯಲ್ಲಿ ನಿಲ್ಲಿಸಿದ್ದಾಗ, ಮುಂಜಾನೆ ಅಪಘಾತ ಸಂಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.