Flipkart Big Billion Days Saleನಲ್ಲಿ ಈ ಸ್ಮಾರ್ಟ್ ಫೋನ್ ಮೇಲೆ 50 ಶೇ ಡಿಸ್ಕೌಂಟ್ !

Flipkart Big Billion Days Sale :ಭಾರತದಲ್ಲಿ ನಿನ್ನೆಯಿಂದ ಆರಂಭವಾಗಿರುವ ಆನ್‌ಲೈನ್ ಸೇಲ್ ಅಕ್ಟೋಬರ್ 15ರವರೆಗೆ ನಡೆಯಲಿದೆ. ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಸ್ಮಾರ್ಟ್‌ವಾಚ್‌ಗಳು, ಇಯರ್‌ಬಡ್‌ಗಳು ಮತ್ತು ಸ್ಮಾರ್ಟ್ ಟಿವಿಗಳು ಸೇರಿದಂತೆ ಅನೇಕ ಉತ್ಪನ್ನಗಳು ಸೇರಿವೆ. 

Written by - Ranjitha R K | Last Updated : Oct 9, 2023, 04:11 PM IST
  • Flipkart ಆನ್‌ಲೈನ್ ಸೇಲ್ ಅಕ್ಟೋಬರ್ 15ರವರೆಗೆ ನಡೆಯಲಿದೆ
  • ಈ ಸೇಲ್‌ನಲ್ಲಿ ಅನೇಕ ಉತ್ಪನ್ನಗಳ ಮೇಲೆ ಭಾರೀ ರಿಯಾಯಿತಿ
  • ಶಕ್ತಿಶಾಲಿ ಸ್ಮಾರ್ಟ್‌ಫೋನ್‌ಗಳು ಈಗ ರಿಯಾಯಿತಿ ದರದಲ್ಲಿ
Flipkart Big Billion Days Saleನಲ್ಲಿ ಈ  ಸ್ಮಾರ್ಟ್ ಫೋನ್ ಮೇಲೆ  50 ಶೇ ಡಿಸ್ಕೌಂಟ್ !  title=

Flipkart Big Billion Days Sale : ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ 2023 ಮಾರಾಟದ ಅಧಿಕೃತ ದಿನಾಂಕಗಳನ್ನು ಒಂದು ವಾರದ ಹಿಂದೆ ಘೋಷಿಸಲಾಯಿತು. ಭಾರತದಲ್ಲಿ ನಿನ್ನೆಯಿಂದ ಆರಂಭವಾಗಿರುವ ಆನ್‌ಲೈನ್ ಸೇಲ್ ಅಕ್ಟೋಬರ್ 15ರವರೆಗೆ ನಡೆಯಲಿದೆ. ಈ ಸೇಲ್‌ನಲ್ಲಿ ಅನೇಕ ಉತ್ಪನ್ನಗಳ ಮೇಲೆ ಭಾರೀ ರಿಯಾಯಿತಿ ಘೋಷಿಸಲಾಗಿದೆ. ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಸ್ಮಾರ್ಟ್‌ವಾಚ್‌ಗಳು, ಇಯರ್‌ಬಡ್‌ಗಳು ಮತ್ತು ಸ್ಮಾರ್ಟ್ ಟಿವಿಗಳು ಸೇರಿದಂತೆ ಅನೇಕ ಉತ್ಪನ್ನಗಳು ಸೇರಿವೆ. 

ಫ್ಲಿಪ್‌ಕಾರ್ಟ್ ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮತ್ತು ಕೊಟಕ್ ಬ್ಯಾಂಕ್ ಇತ್ಯಾದಿಗಳೊಂದಿಗೆ ಪಾಲುದಾರಿಕೆ ಹೊಂದಿದೆ. ಈ ಸೇಲ್ ಸಮಯದಲ್ಲಿ ತನ್ನ ಕಾರ್ಡ್ ಮತ್ತು ಇಎಂಐ ವಹಿವಾಟುಗಳ ಮೂಲಕ ಮಾಡಿದ ಖರೀದಿಗಳ ಮೇಲೆ ತ್ವರಿತ ರಿಯಾಯಿತಿಗಳನ್ನು ನೀಡುತ್ತದೆ. ಈ ಸೇಲ್‌ನಲ್ಲಿ Samsung Galaxy F13, Motorola G32, Oppo A17K, Realme C55 ಮತ್ತು ಇತರ ಸ್ಮಾರ್ಟ್‌ಫೋನ್‌ಗಳು ಈಗ ರಿಯಾಯಿತಿ ದರದಲ್ಲಿ ಲಭ್ಯವಿವೆ. 

ಇದನ್ನೂ ಓದಿ : Reliance Jio ಫ್ರೀಪೈಡ್ ಬಳಕೆದಾರರಿಗೆ ಒಂದು ಬಂಬಾಟ್ ಸುದ್ದಿ, ಉಚಿತವಾಗಿ ಸಿಗಲಿದೆ ಈ ಅವಕಾಶ!

Samsung Galaxy F13 : ಫ್ಲಿಪ್‌ಕಾರ್ಟ್ ಸೇಲ್ ಸಮಯದಲ್ಲಿ, 9199 ರೂ. ಗೆ ಸ್ಮಾರ್ಟ್‌ಫೋನ್ ಖರೀದಿಸಬಹುದು. ಈ ಫೋನ್ ಮೇಲೆ ಕೊಡುಗೆಯನ್ನು 38 ಪ್ರತಿಶತ ರಿಯಾಯಿತಿ ನೀಡಲಾಗುತ್ತಿದೆ. ಈ ಫೋನ್ ಗೊರಿಲ್ಲಾ ಗ್ಲಾಸ್ 5 ನೊಂದಿಗೆ 6.6-ಇಂಚಿನ ಪೂರ್ಣ HD+ ಡಿಸ್ಪ್ಲೇಯನ್ನು ಹೊಂದಿದೆ. Exynos 850 ಪ್ರೊಸೆಸರ್‌ನಿಂದ ಚಾಲಿತವಾಗಿದೆ. 8GB RAM ಮತ್ತು 64GB ಇಂಟರ್ನಲ್ ಸ್ಟೋರೇಜ್ ನೊಂದಿಗೆ ಬರುತ್ತದೆ. ಇದರ ಕ್ಯಾಮೆರಾ ಸೆಟಪ್ 50 MP ಮುಖ್ಯ ಕ್ಯಾಮೆರಾವನ್ನು ಒಳಗೊಂಡಿದೆ. ಇದು 8 MP ಮುಂಭಾಗದ ಕ್ಯಾಮೆರಾದೊಂದಿಗೆ ಬರುತ್ತದೆ. ಇದು 6000 mAh ಲಿಥಿಯಂ ಐಯಾನ್ ಬ್ಯಾಟರಿಯನ್ನು ಹೊಂದಿದೆ.

Motorola G32 : ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್ ಅನ್ನು  9999 ರೂ.ಗೆ ಖರೀದಿಸಬಹುದು. ಈ ಫೋನ್  ಬೆಲೆ 18,999 ರೂಪಾಯಿ. ಈ ಫೋನ್ 90Hz ರಿಫ್ರೆಶ್ ದರದೊಂದಿಗೆ 6.5-ಇಂಚಿನ ಪೂರ್ಣ HD+ ಡಿಸ್ಪ್ಲೇಯೊಂದಿಗೆ ಬರುತ್ತದೆ. 50MP ಮೇನ್ ಕ್ಯಾಮೆರಾ ಮತ್ತು 16MP ಮುಂಭಾಗದ ಕ್ಯಾಮರಾವನ್ನು ಒಳಗೊಂಡಿರುವ ಟ್ರಿಪಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ Qualcomm Snapdragon 680 ಪ್ರೊಸೆಸರ್‌ನಿಂದ ಚಾಲಿತವಾಗಿದೆ. 5000 mAh ಲಿಥಿಯಂ ಪಾಲಿಮರ್ ಬ್ಯಾಟರಿಯನ್ನು ಹೊಂದಿದೆ. ಇದು 33 W ಟರ್ಬೋಪವರ್ ಚಾರ್ಜರ್ ಅನ್ನು ಬೆಂಬಲಿಸುತ್ತದೆ.

ಇದನ್ನೂ ಓದಿ : ಶೀಘ್ರವೇ ಅದ್ಭುತ ವೈಶಿಷ್ಟ್ಯ & ವಿನ್ಯಾಸ ಹೊಂದಿರುವ Oppo Find N3 ಫ್ಲಿಪ್ ಬಿಡುಗಡೆ

Oppo A17k : ಈ ಸ್ಮಾರ್ಟ್‌ಫೋನ್ ಅನ್ನು ಕೇವಲ 8,999 ರೂ.ಗಳಿಗೆ ಖರೀದಿಸಬಹುದು. ಈ ಫೋನ್ ಮೇಲೆ 30 ಪ್ರತಿಶತದಷ್ಟು ರಿಯಾಯಿತಿ ನೀಡಲಾಗಿದೆ. ಇದರ ಬೆಲೆ 12,999 ರೂ. ಈ ಸಾಧನವು 6.56-ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿದೆ. MediaTek Helio P35 ಪ್ರೊಸೆಸರ್ ನಿಂದ ಚಾಲಿತವಾಗಿದೆ. ಇದು 8MP AI  ಮೇನ್ ಕ್ಯಾಮೆರಾ ಮತ್ತು ಸೆಲ್ಫಿಗಳಿಗಾಗಿ 5MP ಮುಂಭಾಗದ ಕ್ಯಾಮೆರಾವನ್ನು ಒಳಗೊಂಡಿದೆ. ಸ್ಮಾರ್ಟ್ಫೋನ್ 5000 mAh ಬ್ಯಾಟರಿಯೊಂದಿಗೆ ಬರುತ್ತದೆ. ಹೆಚ್ಚುವರಿ  ಸ್ಟೋರೇಜ್ ಗಾಗಿ RAM ವಿಸ್ತರಣೆ ತಂತ್ರಜ್ಞಾನವನ್ನು ಹೊಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News