ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2022: ಜನಪ್ರಿಯ ಇ-ಕಾಮರ್ಸ್ ಸೈಟ್ ಅಮೆಜಾನ್‌ನಲ್ಲಿ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನಡೆಯುತ್ತಿದೆ. ಈ ಸೇಲ್‌ನಲ್ಲಿ, ಸ್ಮಾರ್ಟ್‌ಫೋನ್‌ಗಳ ಮೇಲೆ ದೊಡ್ಡ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ನೀವು ಅತ್ಯುತ್ತಮ ಸ್ಮಾರ್ಟ್‌ಫೋನ್ ಅನ್ನು ಕಡಿಮೆ ಬೆಲೆಯಲ್ಲಿ ಖರೀದಿಸಲು ಯೋಚಿಸುತ್ತಿದ್ದರೆ, ನಿಮಗೆ ಒಳ್ಳೆಯ ಅವಕಾಶವಿದೆ.
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಒಮ್ಮೆ ಫುಲ್ ಚಾರ್ಜ್ ಆದರೆ 3 ದಿನ ಕಾರ್ಯನಿರ್ವಹಿಸಬಲ್ಲ ನೋಕಿಯಾ ಸ್ಮಾರ್ಟ್‌ಫೋನ್ ಮೇಲೆ ಬಂಪರ್ ಆಫರ್ ನೀಡಲಾಗುತ್ತಿದೆ. ಈ ಸೇಲ್‌ನಲ್ಲಿ ನೋಕಿಯಾದ 12,499 ರೂ. ಬೆಲೆಯ ಸ್ಮಾರ್ಟ್‌ಫೋನ್ ಅನ್ನು ಕೇವಲ 849 ರೂ.ಗಳಿಗೆ ಖರೀದಿಸಬಹುದು. ಏನಿದು ಕೊಡುಗೆ ಎಂದು ತಿಳಿಯೋಣ...
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2022: Nokia G21 ಕೊಡುಗೆಗಳು ಮತ್ತು ರಿಯಾಯಿತಿಗಳು:
Nokia G21 (4GB RAM + 64GB ಸ್ಟೋರೇಜ್) ಬಿಡುಗಡೆ ಬೆಲೆ 14,499 ರೂ. ಆಗಿದೆ. ಆದರೆ, ಅಮೆಜಾನ್‌ನಲ್ಲಿ ನೀವು ಈ ಸ್ಮಾರ್ಟ್‌ಫೋನ್ ಮೇಲೆ 2 ಸಾವಿರ ರೂಪಾಯಿ ರಿಯಾಯಿತಿ ನೀಡಲಾಗುತ್ತಿದೆ. ಹಾಗಾಗಿ, ಈ ಫೋನ್ ಅನ್ನು 12,499 ರೂ.ಗೆ ಖರೀದಿಸಬಹುದು. ಇದಲ್ಲದೆ, ಈ ಸೇಲ್‌ನಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಯ ಮೇಲೆ ಬ್ಯಾಂಕ್ ಮತ್ತು ವಿನಿಮಯ ಕೊಡುಗೆಗಳು ಸಹ ಇವೆ, ಇದರಿಂದಾಗಿ ಫೋನ್‌ನ ಬೆಲೆ ಗಮನಾರ್ಹವಾಗಿ ಕಡಿಮೆಯಾಗುತ್ತದೆ.
ಇದನ್ನೂ ಓದಿ- Flipkart Big Billion Days 2022: 40-ಇಂಚಿನ ಸ್ಮಾರ್ಟ್ ಟಿವಿ ಕೇವಲ 2,499 ರೂ.ಗೆ ಲಭ್ಯ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2022: Nokia G21 ಎಕ್ಸ್ಚೇಂಜ್ ಆಫರ್:
Nokia G21 ನಲ್ಲಿ 11,650 ರೂಪಾಯಿಗಳ ಎಕ್ಸ್‌ಚೇಂಜ್ ಆಫರ್ ಇದೆ, ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಅನ್ನು ವಿನಿಮಯ ಮಾಡಿಕೊಂಡರೆ ನೀವು ಇಷ್ಟು ರಿಯಾಯಿತಿ ಪಡೆಯಬಹುದು. ಆದರೆ ಫೋನ್‌ನ ಸ್ಥಿತಿ ಉತ್ತಮವಾಗಿದ್ದರೆ ಮತ್ತು ಮಾಡೆಲ್ ಲೇಟೆಸ್ಟ್ ಆಗಿದ್ದರೆ ಮಾತ್ರ 11,650 ರೂ.ಗಳ ರಿಯಾಯಿತಿ ಲಭ್ಯವಿರುತ್ತದೆ. ನೀವು ಈ ಎಲ್ಲಾ ಕೊಡುಗೆಗಳ ಲಾಭವನ್ನು ಪಡೆಯಲು ಸಾಧ್ಯವಾದರೆ ಫೋನ್‌ನ ಬೆಲೆ 849 ರೂ.ಗಳಿಗೆ ಇಳಿಕೆ ಆಗಲಿದೆ.
ಇದನ್ನೂ ಓದಿ- ಕೇವಲ 12 ಸಾವಿರ ರೂಪಾಯಿಗಳಲ್ಲಿ ಐಫೋನ್ ಖರೀದಿಸುವ ಅವಕಾಶ, ಏನಿದು ಆಫರ್ ತಿಳಿಯಿರಿ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2022: Nokia G21 ಬ್ಯಾಂಕ್ ಆಫರ್:
ನೀವು ಹಳೆಯ ಫೋನ್ ಅನ್ನು ವಿನಿಮಯ ಮಾಡಿಕೊಳ್ಳಲು ಬಯಸದಿದ್ದರೆ ಅಥವಾ ಉತ್ತಮ ವಿನಿಮಯ ಕೊಡುಗೆಯನ್ನು ಪಡೆಯದಿದ್ದರೆ, ಬ್ಯಾಂಕ್ ಕೊಡುಗೆಗಳು ಸಹ ಲಭ್ಯವಿವೆ. ನೀವು ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಸಿ ಈ ಫೋನ್ ಖರೀದಿಸಿದರೆ ನಿಮಗೆ ಸಾವಿರ ರೂಪಾಯಿಗಳ ರಿಯಾಯಿತಿ ಲಭ್ಯವಾಗಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.