ಫ್ಲಿಪ್‌ಕಾರ್ಟ್‌ನಲ್ಲಿ 42-ಇಂಚಿನ ಸ್ಮಾರ್ಟ್ ಟಿವಿ ಕೇವಲ 2,499 ರೂ.ಗೆ ಖರೀದಿಸಿ

Smart TV Under 3k: ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ದೀಪಾವಳಿ ಸೇಲ್ ಆರಂಭವಾಗಿದೆ.  ಇಂದು ಫ್ಲಿಪ್‌ಕಾರ್ಟ್‌ನಲ್ಲಿ  Blaupunkt ನ 42 ಇಂಚಿನ ಸ್ಮಾರ್ಟ್ ಟಿವಿಯನ್ನು ಕೇವಲ 2,499 ರೂಗಳ.ಲ್ಲಿ ಖರೀದಿಸಬಹುದು. ಏನಿದು ಆಫರ್ ತಿಳಿಯಿರಿ.

Written by - Yashaswini V | Last Updated : Oct 19, 2022, 12:51 PM IST
  • Blaupunkt Cybersound 42 ಇಂಚಿನ ಸ್ಮಾರ್ಟ್ ಟಿವಿಯ ಪ್ರಾರಂಭಿಕ ಬೆಲೆ 29,999 ರೂ. ಆಗಿದೆ.
  • ಆದರೆ ಫ್ಲಿಪ್‌ಕಾರ್ಟ್‌ನಲ್ಲಿ 42 ಇಂಚಿನ ಸ್ಮಾರ್ಟ್ ಟಿವಿ ಖರೀದಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತಿದೆ.
  • ಇದಲ್ಲದೆ, ಇದರಲ್ಲಿ ಇನ್ನೂ ಹಲವು ಬ್ಯಾಂಕ್ ಮತ್ತು ಎಕ್ಸ್ ಚೇಂಜ್ ಆಫರ್ ಗಳಿದ್ದು, ಇದರಿಂದ ಟಿವಿ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ.
ಫ್ಲಿಪ್‌ಕಾರ್ಟ್‌ನಲ್ಲಿ 42-ಇಂಚಿನ ಸ್ಮಾರ್ಟ್ ಟಿವಿ ಕೇವಲ 2,499 ರೂ.ಗೆ ಖರೀದಿಸಿ title=
Flipkart diwali sale 2022

Flipkar Big Diwali Sale: ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ದೀಪಾವಳಿ ಸೇಲ್ ಆರಂಭವಾಗಿದೆ. ಈ ಸೇಲ್ ಅಕ್ಟೋಬರ್ 23 ರವರೆಗೆ ನಡೆಯಲಿದೆ.  ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು, ಸ್ಮಾರ್ಟ್ ಟಿವಿಗಳು ಮತ್ತು ಅನೇಕ ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲೆ ದೊಡ್ಡ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ನೀವು ಈ ದೀಪಾವಳಿಯಲ್ಲಿ ಕಡಿಮೆ ಬಜೆಟ್ನಲ್ಲಿ ಮನೆಗೆ ಹೊಸ ಸ್ಮಾರ್ಟ್ ಟಿವಿ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ ಈ ಸೇಲ್ ಅನ್ನು ಮಿಸ್ ಮಾಡಿಕೊಳ್ಳಬೇಡಿ.  ಇಂದು ಫ್ಲಿಪ್‌ಕಾರ್ಟ್‌ನಲ್ಲಿ 30,000 ರೂ. ಮೌಲ್ಯದ Blaupunkt ನ 42 ಇಂಚಿನ ಸ್ಮಾರ್ಟ್ ಟಿವಿಯನ್ನು ಕೇವಲ 2,499 ರೂಗಳಲ್ಲಿ ಖರೀದಿಸಬಹುದು. ಏನಿದು ಆಫರ್ ತಿಳಿಯಿರಿ.

ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಸೇಲ್- ಬ್ಲಾಪುಂಕ್ಟ್ ಸೈಬರ್‌ಸೌಂಡ್ 42 ಇಂಚಿನ ಸ್ಮಾರ್ಟ್ ಟಿವಿ ಕೊಡುಗೆಗಳು ಮತ್ತು ರಿಯಾಯಿತಿಗಳು:
Blaupunkt Cybersound 42 ಇಂಚಿನ ಸ್ಮಾರ್ಟ್ ಟಿವಿಯ ಪ್ರಾರಂಭಿಕ ಬೆಲೆ 29,999 ರೂ. ಆಗಿದೆ. ಆದರೆ ಫ್ಲಿಪ್‌ಕಾರ್ಟ್‌ನಲ್ಲಿ ಇದನ್ನು 14,999 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ. ಅಂದರೆ 42 ಇಂಚಿನ ಸ್ಮಾರ್ಟ್ ಟಿವಿ ಖರೀದಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಇದಲ್ಲದೆ, ಇದರಲ್ಲಿ ಇನ್ನೂ ಹಲವು ಬ್ಯಾಂಕ್ ಮತ್ತು ಎಕ್ಸ್ ಚೇಂಜ್ ಆಫರ್ ಗಳಿದ್ದು, ಇದರಿಂದ ಟಿವಿ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ.

ಇದನ್ನೂ ಓದಿ- ಚಳಿಗಾಲದಲ್ಲಿ ಬಿಸಿ ನೀರಿಗಾಗಿ ಟ್ಯಾಪ್‌ನೊಂದಿಗೆ ಫಿಟ್ ಮಾಡಿ ಈ ಎಲೆಕ್ಟ್ರಿಕ್ ವಾಟರ್ ಹೀಟರ್

ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಸೇಲ್- ಬ್ಲಾಪುಂಕ್ಟ್ ಸೈಬರ್‌ಸೌಂಡ್ 42 ಇಂಚಿನ ಸ್ಮಾರ್ಟ್ ಟಿವಿ ಬ್ಯಾಂಕ್ ಆಫರ್:
Blaupunkt Cybersound 42 ಇಂಚಿನ ಸ್ಮಾರ್ಟ್ ಟಿವಿಯನ್ನು ಖರೀದಿಸಲು ನೀವು ಎಸ್ಬಿಐ ಕ್ರೆಡಿಟ್ ಕಾರ್ಡ್ ಅನ್ನು ಬಳಸಿದರೆ, ನೀವು 1,500 ರೂಪಾಯಿಗಳ ರಿಯಾಯಿತಿಯನ್ನು ಪಡೆಯುತ್ತೀರಿ. ಆ ನಂತರ ಟಿವಿ ಬೆಲೆ 13,449 ರೂ.ಗೆ ಇಳಿಯಲಿದೆ. ಅದರ ನಂತರ ವಿನಿಮಯ ಕೊಡುಗೆಯೂ ಇದೆ, ಇದು ಬೆಲೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಇದನ್ನೂ ಓದಿ- T20 ವಿಶ್ವಕಪ್ ಶುರುವಾಗುತ್ತಿದ್ದಂತೆ ಗ್ರಾಹಕರಿಗೆ ಜಿಯೋ ಶಾಕ್!

ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಮಾರಾಟ- ಬ್ಲಾಪುಂಕ್ಟ್ ಸೈಬರ್‌ಸೌಂಡ್ 42 ಇಂಚಿನ ಸ್ಮಾರ್ಟ್ ಟಿವಿ ಎಕ್ಸ್‌ಚೇಂಜ್ ಆಫರ್: 
ಬ್ಲಾಪುಂಕ್ಟ್ ಸೈಬರ್ ಸೌಂಡ್ 42 ಇಂಚಿನ ಸ್ಮಾರ್ಟ್ ಟಿವಿಯಲ್ಲಿ ರೂ.11 ಸಾವಿರ ಎಕ್ಸ್ ಚೇಂಜ್ ಆಫರ್ ಇದೆ. ನೀವು ಹಳೆಯ ಟಿವಿಯನ್ನು ವಿನಿಮಯ ಮಾಡಿಕೊಂಡರೆ ನೀವು ಇಷ್ಟು ರಿಯಾಯಿತಿ ಪಡೆಯಬಹುದು. ಆದರೆ ಟಿವಿಯ ಸ್ಥಿತಿ ಉತ್ತಮವಾಗಿದ್ದರೆ ಮತ್ತು ಮಾಡೆಲ್ ಇತ್ತೀಚಿನದಾಗಿದ್ದರೆ ಮಾತ್ರ 11 ಸಾವಿರದ ಪೂರ್ಣ ಆಫ್ ಲಭ್ಯವಿರುತ್ತದೆ. ನೀವು ಈ ಎಲ್ಲಾ ಕೊಡುಗೆಯ ಲಾಭವನ್ನು ಪಡೆಯಲು ಸಾಧ್ಯವಾದರೆ 42 ಇಂಚಿನ ಸ್ಮಾರ್ಟ್ ಟಿವಿಯನ್ನು 2,499 ರೂ.ಗೆ ಖರೀದಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News