ಟಿವಿ, ಮೊಬೈಲ್, ಕಂಪ್ಯೂಟರ್ ಖರೀದಿಸಲು ಯೋಚಿಸುತ್ತಿರುವವರಿಗೆ ಗುಡ್ ನ್ಯೂಸ್

Price Cut: ನೀವೂ ಕೂಡ ಹೊಸ ಟಿವಿ, ಮೊಬೈಲ್, ಕಂಪ್ಯೂಟರ್ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ ನಿಮಗಾಗಿ ಇಲ್ಲಿದೆ ಒಂದು ಗುಡ್ ನ್ಯೂಸ್. ಸದಯದಲ್ಲೇ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಕಡಿತಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ. 

Written by - Yashaswini V | Last Updated : Jun 21, 2023, 01:40 PM IST
  • ಎರಡು ವರ್ಷಗಳ ಹಿಂದೆ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ಕಾರ್ಖಾನೆಗಳಿಗೆ ಈ ವಸ್ತುಗಳನ್ನು ಕಳುಹಿಸುವ ವೆಚ್ಚವು ದಾಖಲೆಯ ಮಟ್ಟವನ್ನು ತಲುಪಿತ್ತು.
  • ಇದರಿಂದಾಗಿ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಯೂ ಹೆಚ್ಚಾಗಿತ್ತು.
  • ಇದೀಗ ಎಲ್ಲವೂ ಸಹಜ ಸ್ಥಿತಿಯತ್ತ ಮರಳುತ್ತಿರುವ ಹಿನ್ನಲೆಯಲ್ಲಿ ಇಲೆಕ್ಟ್ರಾನಿಕ್ಸ್ ಕಂಪನಿಗಳು ಉತ್ಪನ್ನದ ಬೆಲೆಯನ್ನು ಕಡಿಮೆ ಮಾಡಲು ಪರಿಗಣಿಸಬಹುದು ಎಂದು ತಿಳಿದುಬಂದಿದೆ.
ಟಿವಿ, ಮೊಬೈಲ್, ಕಂಪ್ಯೂಟರ್ ಖರೀದಿಸಲು ಯೋಚಿಸುತ್ತಿರುವವರಿಗೆ ಗುಡ್ ನ್ಯೂಸ್  title=

Electronic Components Price Cut: ನೀವೂ ಕೂಡ ಹೊಸ ಟಿವಿ, ಮೊಬೈಲ್, ಕಂಪ್ಯೂಟರ್ ಸೇರಿದಂತೆ ಮನೆಗೆ ಹೊಸ ಹೊಸ ಎಲೆಕ್ಟ್ರಾನಿಕ್ ವಸ್ತುಗಳನ್ನು ತರುವ ಬಗ್ಗೆ ಚಿಂತಿಸುತ್ತಿದ್ದೀರಾ... ಹಾಗಿದ್ದರೆ ನಿಮಗಿದೆ ಇಲ್ಲೊಂದು ಗುಡ್ ನ್ಯೂಸ್. ಸದ್ಯದಲ್ಲೇ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬರಲಿದೆ ಎಂದು ಹೇಳಲಾಗುತ್ತಿದೆ. 

ವಾಸ್ತವವಾಗಿ, ಎರಡು ವರ್ಷಗಳ ಹಿಂದೆ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ಕಾರ್ಖಾನೆಗಳಿಗೆ ಈ ವಸ್ತುಗಳನ್ನು ಕಳುಹಿಸುವ ವೆಚ್ಚವು ದಾಖಲೆಯ ಮಟ್ಟವನ್ನು ತಲುಪಿತ್ತು. ಇದರಿಂದಾಗಿ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಯೂ ಹೆಚ್ಚಾಗಿತ್ತು. ಇದೀಗ ಎಲ್ಲವೂ ಸಹಜ ಸ್ಥಿತಿಯತ್ತ ಮರಳುತ್ತಿರುವ ಹಿನ್ನಲೆಯಲ್ಲಿ ಇಲೆಕ್ಟ್ರಾನಿಕ್ಸ್ ಕಂಪನಿಗಳು ಉತ್ಪನ್ನದ ಬೆಲೆಯನ್ನು ಕಡಿಮೆ ಮಾಡಲು ಪರಿಗಣಿಸಬಹುದು ಎಂದು ತಿಳಿದುಬಂದಿದೆ. ಇದರರಿಂದಾಗಿ, ದೂರದರ್ಶನ, ಮೊಬೈಲ್ ಮತ್ತು ಕಂಪ್ಯೂಟರ್‌ನಂತಹ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ವರದಿಯೊಂದು ತಿಳಿಸಿದೆ.  

ಇದನ್ನೂ ಓದಿ- Google Secrets Tricks: ಗೂಗಲ್ ನ ಈ ಸೀಕ್ರೆಟ್ಸ್ ಬಗ್ಗೆ ಕೆಲವೇ ಮಂದಿಗಷ್ಟೇ ಗೊತ್ತು!

ಲಭ್ಯವಿರುವ ಮಾಹಿತಿಯ ಪ್ರಕಾರ, ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ ಕಂಪನಿಗಳು ಇನ್‌ಪುಟ್ ವೆಚ್ಚದಲ್ಲಿನ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬಹುದು ಎಂದು ಕ್ಷೇತ್ರಕ್ಕೆ ಸಂಬಂಧಿಸಿದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

ಇದನ್ನೂ ಓದಿ- ವಿದ್ಯುತ್ ಮೀಟರ್ ಜೊತೆ ಈ ಟಿಪ್ಸ್ ಅನುಸರಿಸಿದರೆ ಎಸಿ-ಫ್ಯಾನ್ ಬಳಸಿದರೂ ಕಡಿಮೆ ಬರುತ್ತೆ ಕರೆಂಟ್ ಬಿಲ್!

ಚೀನಾದಿಂದ ಕಂಟೇನರ್ ಅನ್ನು ಸಾಗಿಸುವ ವೆಚ್ಚವು ದಾಖಲೆಯ ಮಟ್ಟ $ 8,000 ತಲುಪಿದೆ. ಈಗ ಅದು 850 ರಿಂದ 1,000 ಡಾಲರ್‌ಗೆ ಕುಸಿದಿರುವುದು ಗಮನಾರ್ಹ ವಿಷಯವಾಗಿದೆ. 

ಇದಲ್ಲದೆ, 2021-2022ರಲ್ಲಿ 16,400 ರೂ.ಗೆ ಹೋಲಿಸಿದರೆ 2022-23ರಲ್ಲಿ ಸರಾಸರಿ ಮಾರಾಟ ಬೆಲೆ ಸುಮಾರು 11,500 ರೂ.ಗೆ ಇಳಿದಿದೆ. ಬೇಡಿಕೆ ಕುಸಿದಿರುವುದರಿಂದ ಕಂಟೈನರ್ ಗಳನ್ನು ತುಂಬಲು ಸಾಧ್ಯವಾಗುತ್ತಿಲ್ಲ ಎಂದು ಎಲೆಕ್ಟ್ರಾನಿಕ್ಸ್ ಬ್ರಾಂಡ್ ಹೈಯರ್ ಇಂಡಿಯಾದ ಅಧ್ಯಕ್ಷ ಸತೀಶ್ ಎನ್ ಎಸ್ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News