Flipkart Big Saving Days: ರೆಡ್‌ಮಿಯ 5 ಜಿ ಫೋನ್ ಕೇವಲ 1500 ರೂ. ಗೆ ಲಭ್ಯ

Flipkart Big Saving Days: ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ನಡೆಯುತ್ತಿದೆ, ಇದು ಏಪ್ರಿಲ್ 14 ರವರೆಗೆ ನಡೆಯಲಿದೆ.  ಈ ಸೇಲ್‌ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ರೆಡ್ಮಿಯ ನೋಟ್ 10ಟಿ 5ಜಿ ಸ್ಮಾರ್ಟ್‌ಫೋನ್ ಅನ್ನು 1500 ರೂಪಾಯಿಗಳಿಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಹೇಗೆ ಹೇಳೋಣ.

Written by - Yashaswini V | Last Updated : Apr 13, 2022, 11:12 AM IST
  • ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ನಡೆಯುತ್ತಿದೆ.
  • ಈ ಮಾರಾಟದಲ್ಲಿ, ರೆಡ್ಮಿ ನೋಟ್ 10ಟಿ 5ಜಿ ಅನ್ನು ರೂ. 1500 ಕ್ಕಿಂತ ಕಡಿಮೆ ಬೆಲೆಗೆ ಖರೀದಿಸಬಹುದು.
  • ಇತ್ತೀಚೆಗೆ ಬಿಡುಗಡೆಯಾದ ರೆಡ್ಮಿ ನೋಟ್ 10ಟಿ 5ಜಿ ಸ್ಮಾರ್ಟ್‌ಫೋನ್ ಅನ್ನು ಕಡಿಮೆ ಬೆಲೆಯಲ್ಲಿ ಖರೀದಿಸುವುದು ಹೇಗೆ ಎಂದು ತಿಳಿಯಿರಿ.
Flipkart Big Saving Days: ರೆಡ್‌ಮಿಯ 5 ಜಿ ಫೋನ್ ಕೇವಲ  1500 ರೂ. ಗೆ ಲಭ್ಯ  title=
Flipkart Big Saving Days

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್: ಫ್ಲಿಪ್‌ಕಾರ್ಟ್‌ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್ ಏಪ್ರಿಲ್ 12 ರಿಂದ ಪ್ರಾರಂಭವಾಗಿದೆ, ಇದು ಏಪ್ರಿಲ್ 14 ರವರೆಗೆ ನಡೆಯಲಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು, ಸ್ಮಾರ್ಟ್ ಟಿವಿಗಳು ಮತ್ತು ಅನೇಕ ಎಲೆಕ್ಟ್ರಾನಿಕ್ ಉತ್ಪನ್ನಗಳ ಮೇಲೆ ಅದ್ಭುತ ರಿಯಾಯಿತಿಗಳು ಲಭ್ಯವಿವೆ. ಅತ್ಯಂತ ದುಬಾರಿ ಸ್ಮಾರ್ಟ್‌ಫೋನ್‌ಗಳನ್ನು ಸೇಲ್‌ನಲ್ಲಿ ಅತ್ಯಂತ ಅಗ್ಗವಾಗಿ ಖರೀದಿಸಬಹುದು. ಆಫರ್‌ಗಳ ಪ್ರಯೋಜನ ಪಡೆಯುವ ಮೂಲಕ ಕಡಿಮೆ ಬೆಲೆಯಲ್ಲಿ ಫೋನ್ ಅನ್ನು ಖರೀದಿಸಬಹುದು. ಈ ಸೇಲ್‌ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ರೆಡ್ಮಿಯ ನೋಟ್ 10ಟಿ 5ಜಿ ಸ್ಮಾರ್ಟ್‌ಫೋನ್ ಅನ್ನು 1500 ರೂಪಾಯಿಗಳಿಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು. ಹೇಗೆ ಎಂದು ತಿಳಿಯಲು ಮುಂದೆ ಓದಿ...

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್: Redmi Note 10T 5G ಕೊಡುಗೆಗಳು ಮತ್ತು ರಿಯಾಯಿತಿಗಳು
ರೆಡ್ಮಿ ನೋಟ್ 10ಟಿ 5ಜಿ 4ಜಿಬಿ ರಾಮ್ + 64ಜಿಬಿ ಸ್ಟೋರೇಜ್ ರೂಪಾಂತರದ ಬಿಡುಗಡೆಯ ಬೆಲೆ ರೂ. 16,999 ಆಗಿದೆ, ಆದರೆ ಈ ಫೋನ್ ಸೇಲ್‌ನಲ್ಲಿ ರೂ. 12,999 ಗೆ ಲಭ್ಯವಿದೆ. ಅಂದರೆ ಫೋನ್ ಮೇಲೆ 4 ಸಾವಿರ ರೂಪಾಯಿ ರಿಯಾಯಿತಿ ನೀಡಲಾಗುತ್ತಿದೆ. ಇದಾದ ನಂತರ ಎಕ್ಸ್ ಚೇಂಜ್ ಆಫರ್ ಕೂಡ ಇದ್ದು, ಇದರಿಂದ ಫೋನ್ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ.

ಇದನ್ನೂ ಓದಿ- ಕರೆಂಟ್ ಹೋದರು ಚಿಂತಿಸಬೇಕಿಲ್ಲ- ಕೇವಲ 290 ರೂ.ಗೆ ಖರೀದಿಸಿ ರೀಚಾರ್ಜ್ ಮಾಡಬಹುದಾದ ಎಲ್ಇಡಿ ಬಲ್ಬ್‌

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್:  Redmi Note 10T 5G ಎಕ್ಸ್ಚೇಂಜ್ ಆಫರ್
ರೆಡ್ಮಿ ನೋಟ್ 10ಟಿ 5ಜಿನಲ್ಲಿ 11,550 ರೂಪಾಯಿಗಳ ವಿನಿಮಯ ಕೊಡುಗೆ ಕೂಡ ಇದೆ. ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಅನ್ನು ನೀವು ವಿನಿಮಯ ಮಾಡಿಕೊಂಡರೆ, ನೀವು ಇಷ್ಟು ರಿಯಾಯಿತಿ ಪಡೆಯಬಹುದು. ಆದರೆ ನಿಮ್ಮ ಹಳೆಯ ಫೋನ್ ಉತ್ತಮ ಸ್ಥಿತಿಯಲ್ಲಿದ್ದರೆ ಮತ್ತು ಮಾಡೆಲ್ ಇತ್ತೀಚಿನದಾಗಿದ್ದರೆ ಮಾತ್ರ 11,550 ರೂ. ವಿನಿಮಯ ಕೊಡುಗೆಯ ಲಾಭವನ್ನು ಪಡೆಯಬಹುದು. ನೀವು ಪೂರ್ಣ ಕೊಡುಗೆಯ ಸಂಪೂರ್ಣ ಲಾಭ ಪಡೆಯಲು ಸಾಧ್ಯವಾದರೆ ಫೋನ್‌ 1,449 ರೂ.ಗಳಿಗೆ ಲಭ್ಯವಾಗಲಿದೆ.

ಇದನ್ನೂ ಓದಿ- Amazon Fab Phones Fest: 200 ರೂ.ಗಿಂತ ಕಡಿಮೆ ಬೆಲೆಗೆ ಸ್ಮಾರ್ಟ್‌ಫೋನ್‌ ಖರೀದಿಸುವ ಅವಕಾಶ- ಇಲ್ಲಿದೆ ಆಫರ್ಸ್

ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್:  Redmi Note 10T 5G ಬ್ಯಾಂಕ್ ಆಫರ್
ನೀವು ಹಳೆಯ ಸ್ಮಾರ್ಟ್‌ಫೋನ್ ಅನ್ನು ವಿನಿಮಯ ಮಾಡಿಕೊಳ್ಳಲು ಬಯಸದಿದ್ದರೆ, ಬ್ಯಾಂಕ್ ಆಫರ್ ಕೂಡ ಇದೆ. ರೆಡ್ಮಿ ನೋಟ್ 10ಟಿ 5ಜಿ ಖರೀದಿಸಲು ನೀವು ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಅನ್ನು ಬಳಸಿದರೆ, ನೀವು 3 ಸಾವಿರ ರೂಪಾಯಿಗಳ ತ್ವರಿತ ರಿಯಾಯಿತಿಯನ್ನು ಪಡೆಯುತ್ತೀರಿ. ಅಂದರೆ, ಫೋನ್ ಅನ್ನು 9,999 ರೂ. ಗಳಿಗೆ ಖರೀದಿಸಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News