Google Play Store: ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದೆ ಈ ಸೌಲಭ್ಯ

New feature on Google Play Store: ನೀವು ಅತಿ ವೇಗದ ಇಂಟರ್ನೆಟ್ ಸಂಪರ್ಕವನ್ನು ಹೊಂದಿದ್ದರೂ (Wi-Fi ಅಥವಾ 5G), ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಒಂದು ಬಾರಿಗೆ ಒಂದೇ ಒಂದು ಅಪ್ಲಿಕೇಶನ್ ಮಾತ್ರ ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತಿತ್ತು. ಆದರೆ, ಇನ್ನೂ ಮುಂದೆ ಈ ಸಮಸ್ಯೆ ಕೊನೆಗೊಳ್ಳಲಿದೆ. ಈಗ ಬಳಕೆದಾರರು ಒಮ್ಮೆಗೆ  ಏಕಕಾಲದಲ್ಲಿ ಹಲವಾರು ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. 

Written by - Yashaswini V | Last Updated : Mar 11, 2024, 12:09 PM IST
  • ಇದುವರೆಗೆ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಒಂದು ಬಾರಿಗೆ ಒಂದೇ ಒಂದು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ಮಾತ್ರ ಸಾಧ್ಯವಾಗುತ್ತಿತ್ತು
  • ಆದರೀಗ ನೀವು ಏಕಕಾಲದಲ್ಲಿ ಅನೇಕ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಬಹುದು!
  • ವಾಸ್ತವವಾಗಿ, ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಏಕಕಾಲದಲ್ಲಿ ಹಲವು ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಅನುಕೂಲವನ್ನು ಕಲ್ಪಿಸುವ ಉದ್ದೇಶದಿಂದ ಗೂಗಲ್ ಪ್ರಸ್ತುತ ಹೊಸ ಮಾರ್ಗವನ್ನು ಪರೀಕ್ಷಿಸುತ್ತಿದೆ.
Google Play Store: ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದೆ ಈ ಸೌಲಭ್ಯ  title=

Google Play Store download multiple apps at once: ಆಂಡ್ರಾಯ್ಡ್ ಬಳಕೆದಾರರು ತಮ್ಮ ಫೋನ್‌ಗಳಲ್ಲಿ ಅಪ್ಲಿಕೇಶನ್‌ಗಳು ಡೌನ್‌ಲೋಡ್ ಮಾಡಲು ಗೂಗಲ್ ಪ್ಲೇ ಸ್ಟೋರ್ ತುಂಬಾ ಅಗತ್ಯ. ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಬಳಕೆದಾರರು ತಮಗೆ ಅಗತವಾದ ಹೊಸ ಅಪ್ಲಿಕೇಶನ್‌ಗಳನ್ನು  ಡೌನ್‌ಲೋಡ್ ಮಾಡಬಹುದು. ಜೊತೆಗೆ ಈಗಾಗಲೇ ಇನ್ಸ್ಟಾಲ್ ಮಾಡಲಾಗಿರುವ ಅಪ್ಲಿಕೇಶನ್‌ಗಳನ್ನು ನವೀಕರಿಸಬಹುದು. ಆದರೆ, ಅತಿ ವೇಗದ ಇಂಟರ್ನೆಟ್ ಸಂಪರ್ಕವನ್ನು ಹೊಂದಿದ್ದರೂ (Wi-Fi ಅಥವಾ 5G), ಇದುವರೆಗೆ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಒಂದು ಬಾರಿಗೆ ಒಂದೇ ಒಂದು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ಮಾತ್ರ ಸಾಧ್ಯವಾಗುತ್ತಿತ್ತು. ಆದರೆ, ಶೀಘ್ರದಲ್ಲೇ ಈ ಸಮಸ್ಯೆ ನಿವಾರಣೆಯಾಗಲಿದೆ. 

ಈಗ ನೀವು ಏಕಕಾಲದಲ್ಲಿ ಅನೇಕ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಬಹುದು! 
ವಾಸ್ತವವಾಗಿ, ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಏಕಕಾಲದಲ್ಲಿ ಹಲವು ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಅನುಕೂಲವನ್ನು ಕಲ್ಪಿಸುವ ಉದ್ದೇಶದಿಂದ ಗೂಗಲ್  ಪ್ರಸ್ತುತ ಹೊಸ ಮಾರ್ಗವನ್ನು ಪರೀಕ್ಷಿಸುತ್ತಿದೆ. 

ಇದನ್ನೂ ಓದಿ- Xstream Air Fiber ಹೊಸ ಯೋಜನೆಗಳನ್ನು ಬಿಡುಗಡೆ ಮಾಡಿದ Airtel

ಲಭ್ಯವಿರುವ ಮಾಹಿತಿಯ ಪ್ರಕಾರ,  ಗೂಗಲ್ ಪ್ಲೇ ಸ್ಟೋರ್‌ನ ಹೊಸ ಅಪ್‌ಡೇಟ್ (ಆವೃತ್ತಿ 40.0.13) ವಿಶೇಷ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು,  ಈ ವೈಶಿಷ್ಟ್ಯದ ಸಹಾಯದಿಂಆಂಡ್ರಾಯ್ಡ್ ಬಳಕೆದಾರರು ತಮ್ಮ ಫೋನ್‌ಗಳಲ್ಲಿ ಏಕಕಾಲದಲ್ಲಿ ಅನೇಕ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಬಹುದು ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ, ಸದ್ಯ ಈ ವೈಶಿಷ್ಟ್ಯ ಪರೀಕ್ಷಾ ಹಂತದಲ್ಲಿದ್ದು ಕೆಲವರಷ್ಟೇ ಇದನ್ನು ಪ್ರಯತ್ನಿಸುತ್ತಿದ್ದು ಅದರ ಸ್ಕ್ರೀನ್‌ಶಾಟ್‌ಗಳನ್ನು ಕೂಡ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ- Google Maps Tips: ಗೂಗಲ್ ಮ್ಯಾಪ್ಸ್ ನಲ್ಲಿ ನಿಮ್ಮ ಮನೆ ಲೋಕೇಶನ್ ನೋಂದಾಯಿಸಬೇಕೆ? ಪ್ರಕ್ರಿಯೆ ತುಂಬಾ ಸುಲಭವಾಗಿದೆ

ಒಮ್ಮೆಗೆ ಇಷ್ಟು ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಬಹುದು: 
ವರದಿಗಳ ಪ್ರಕಾರ, ಗೂಗಲ್ ಪ್ಲೇ ಸ್ಟೋರ್‌ನ ಹೊಸ ಅಪ್‌ಡೇಟ್ ಜಾರಿಗೆ ಬಂದ ನಂತರ ಬಳಕೆದಾರರು ಏಕಕಾಲದಲ್ಲಿ 5 ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ  ಎನ್ನಲಾಗಿದೆ. ಆದಾಗ್ಯೂ, ಈ ವೈಶಿಷ್ಟ್ಯ ಎಲ್ಲಾ ಬಳಕೆದಾರರಿಗೂ ಯಾವಾಗ ಲಭ್ಯವಾಗಲಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಹೊರಬಿದ್ದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News