10 ತಿಂಗಳ ಮಗುವಿನಲ್ಲಿ HMP ವೈರಸ್! ದೇಶದಲ್ಲಿ ಒಟ್ಟು 15 ಪ್ರಕರಣ!

ದೇಶಾದ್ಯಂತ ಸದ್ದು ಮಾಡುತ್ತಿರುವ ಚೀನಾದ HMP ವೈರಸ್ ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ದಿಬ್ರುಗಡ್ನಲ್ಲಿರುವ  ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Written by - Zee Kannada News Desk | Last Updated : Jan 11, 2025, 10:40 PM IST
  • ಇದರ ಬೆನ್ನಲ್ಲೆ ಅಸ್ಸಾಂನಲ್ಲಿ 10 ತಿಂಗಳ ಮಗುವಿನಲ್ಲಿ HMP ವೈರಸ್​ ಪತ್ತೆಯಾಗಿದೆ.
  • ಕಳೆದ 4 ದಿನಗಳ ಹಿಂದೆಯಷ್ಟೇ ಶೀತ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
10 ತಿಂಗಳ ಮಗುವಿನಲ್ಲಿ HMP ವೈರಸ್! ದೇಶದಲ್ಲಿ ಒಟ್ಟು 15 ಪ್ರಕರಣ! title=

ದೇಶಾದ್ಯಂತ ಸದ್ದು ಮಾಡುತ್ತಿರುವ ಚೀನಾದ HMP ವೈರಸ್ ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ದಿಬ್ರುಗಡ್ನಲ್ಲಿರುವ  ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೋನಾದ ನಂತರ ಚೀನಾದಲ್ಲಿ ಮತ್ತೊಂದು ವೈರಸ್​ ಇರುವ ಎಂಬ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದ್ದವು. ಇದರ ಬೆನ್ನಲ್ಲೆ ಬೆಂಗಳೂರಿನಲ್ಲಿ ದೇಶದ ಮೊದಲ HMPV ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದವು. ಇದಾದ ನಂತರ ದೇಶದ ಅನೇಕ ಭಾಗದಲ್ಲಿ ಸುಮಾರು 8ಕ್ಕು ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದವು.

HMPV ಪಾಸಿಟಿವ್ ಪ್ರಕರಣಗಳು ಸ್ಥಿರವಾಗಿ ಹೆಚ್ಚುತ್ತಿವೆ. ಇದರೊಂದಿಗೆ ದೇಶಾದ್ಯಂತ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಬೆಂಗಳೂರು, ಕೋಲ್ಕತ್ತಾ, ಅಹಮದಾಬಾದ್ ಮತ್ತು ತಮಿಳುನಾಡಿನಲ್ಲಿ ಕಾಣಿಸಿಕೊಂಡಿರುವ ಎಚ್‌ಎಂಪಿವಿ ವೈರಸ್ ಇತ್ತೀಚೆಗೆ ಒಡಿಶಾವನ್ನೂ ಮುಟ್ಟಿದೆ.

ಇದರ ಬೆನ್ನಲ್ಲೆ ಅಸ್ಸಾಂನಲ್ಲಿ 10 ತಿಂಗಳ ಮಗುವಿನಲ್ಲಿ HMP ವೈರಸ್​ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆಯಷ್ಟೇ ಶೀತ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗ ಲಕ್ಷಣಗಳನ್ನು ಪರಿಗಣಿಸಿ ಪರೀಕ್ಷೆಗೆ ಒಳಪಡಿಸಿದ ನಂತರ ಮಗುವಿನಲ್ಲಿ ಹೆಚ್‌ಎಂಪಿವಿ ಸೋಂಕು ಇರೋದು ದೃಢವಾಗಿದೆ ಎಂದು AMCH ಸೂಪರಿಂಟೆಂಡೆಂಟ್ ಧೃಬಜ್ಯೋತಿ ಭುಯಾನ್ ಹೇಳಿದ್ದಾರೆ.

ದಿಬ್ರುಗಢ್‌ನಲ್ಲಿರುವ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (AMCH) ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಮಗುವಿನ ಸ್ಥಿತಿ ಸ್ಥಿರವಾಗಿದೆ. ಎಎಂಸಿಎಚ್ ಅಧೀಕ್ಷಕಿ ಡಾ.ಧ್ರುವಜ್ಯೋತಿ ಭುಯಾನ್ ಮಾತನಾಡಿ, ನಾಲ್ಕು ದಿನಗಳ ಹಿಂದೆ ಚಳಿ ಮತ್ತು ಜ್ವರದ ಲಕ್ಷಣಗಳಿಂದ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವರ್ಷದಲ್ಲಿ ಅಸ್ಸಾಂನಲ್ಲಿ ಕಾಣಿಸಿಕೊಂಡ ಮೊದಲ ಸೋಂಕು ಇದಾಗಿದೆ. ಆದಾಗ್ಯೂ ಇದು ಹೊಸದೇನಲ್ಲ ಎಂದು ವೈದ್ಯರು ಹೇಳಿದ್ದಾರೆ. 2001ರಲ್ಲಿ ಮೊದಲಬಾರಿಗೆ ಗುರುತಿಸಲಾದ ಈ ವೈರಸ್‌ ಹಲವು ವರ್ಷಗಳಿಂದ ಜಾಗತಿಕವಾಗಿ ಅಸ್ತಿತ್ವದಲ್ಲಿದೆ. 2014ರಲ್ಲಿ ಅಸ್ಸಾಂನಲ್ಲಿ ದಿಬ್ರುಗಢ ಜಿಲ್ಲೆಯಲ್ಲಿ 110 ಪ್ರಕರಣಗಳನ್ನು ಗುರುತಿಸಿದ್ದೆವು. ಪ್ರತಿ ವರ್ಷವೂ ಇದು ಪತ್ತೆಯಾಗುತ್ತಿದೆ. ಜನ ಆತಂಕ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿದ್ರೆ ಸಾಕು ಎಂದು ವೈದ್ಯರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News