ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅವರ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅನುಷ್ಕಾ, ಕಂದಮ್ಮನ ಹೆಸರು ಕೂಡ ರಿವೀಲ್ ಮಾಡಿದ್ದಾರೆ. ತಮ್ಮ ಮಗುವಿಗೆ ‘ಅಕಾಯ್’ ಎಂದು ನಾಮಕರಣ ಮಾಡಿರುವುದಾಗಿ ಅನುಷ್ಕಾ ಹೇಳಿದ್ದಾರೆ.