ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಅಥಣಿ ಯುವಕ

  • Zee Media Bureau
  • Oct 1, 2022, 12:20 AM IST

ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡಿದ್ದು ಹೀಗಾಗಿ ಆತನ ಕುಟುಂಬಸ್ಥರು ಅಂಗಾಂಗ ದಾನ ಮಾಡಿ, ಯುವಕನ ಸಾವಿನಂಚಿನಲ್ಲೂ ಸಾರ್ಥಕತೆ ಮೆರೆದು, ನಾಲ್ವರ ಬಾಳಿಗೆ ಬೆಳಕಾಗಿರುವ ಮಾದರಿ ಕಾರ್ಯ ಜರುಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಂಗಳವಾರ ದಿನಾಂಕ 27 ರಂದು ಪ್ರಶಾಂತ ವಿಠ್ಠಲ ಮಲ್ಲೆವಾಡಿ (ಪೂಜಾರಿ)ಎನ್ನುವ 30 ವರ್ಷದ ಯುವಕ ಮನೆಯಲ್ಲಿ ಶೌಚಗ್ರಹಕ್ಕೆ ಹೋಗಿ ಮರಳುವ ವೇಳೆಯಲ್ಲಿ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದು ಆತನನ್ನು‌ ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಯುವಕ ಕೋಮಾಗೆ ತಲುಪಿದ್ದ ಎಷ್ಟೇ ಚಿಕಿತ್ಸೆ ನೀಡಿದರೂ ಆತ ಚೇತರಿಸಿಕೊಳ್ಳಲಿಲ್ಲ. ಅಲ್ಲದೆ ಆತನ ಮಿದುಳು ಕೂಡ ನಿಷ್ಕ್ರಿಯಗೊಂಡಿತ್ತು. ಈ ವೇಳೆ ಯುವಕನ ಪೋಷಕರು ಈ ವಿಷಯ ತಿಳಿದು ಮಗ ಜೀವಂತವಾಗಿ ಉಳಿಯೋದಿಲ್ಲ ಎಂದು ಅರಿತು ಡಾ ಅವಿನಾಶ ನಾಯಿಕ, ರಾಜನ ಸೋಮಯ್ಯ, ಡಾ ಚೌಗಲಾ, ಅವರ ಸಲಹೆಯ ಮೇರೆಗೆ ತಮ್ಮ ಮಗನ ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದರು. ಈ ಮೂಲಕ ನಾಲ್ಕೈದು ಜನರ ಜೀವಕ್ಕೆ ಬೆಳಕು‌ ನೀಡುವ ಮೂಲಕ, ಮಗನ ಸಾವಿನಲ್ಲೂ ಪೋಷಕರು ಸಾರ್ಥಕತೆ ಮೆರೆದರು.

Trending News