ದೇವಿ ಪ್ರಸಾದ್ ಶೆಟ್ಟಿ ಹೊಸ ಸಿನಿಮಾ ಘೋಷಣೆಯಾಗಿದೆ. ವಿಜಯ್ ರಾಘವೇಂದ್ರ ನಟಿಸಿದ್ದ 50ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ದೇವಿ ಪ್ರಸಾದ್ ಶೆಟ್ಟಿ ಈಗ ಮತ್ತೊಮ್ಮೆ ಚಿನ್ನಾರಿ ಮುತ್ತನ ಜೊತೆ ಕೈ ಜೋಡಿಸಿದ್ದಾರೆ. ಬೆಂಗಳೂರಿನ ಧರ್ಮಗಿರಿ ಮಂಜುನಾಥ್ ಸ್ವಾಮಿ ದೇಗುಲದಲ್ಲಿ ಸಿನಿಮಾ ಮುಹೂರ್ತ ನೆರವೇರಿದೆ.. ಸೆಪ್ಟೆಂಬರ್ 28ರಿಂದ ಚಿತ್ರದ ಶೂಟಿಂಗ್ ಆರಂಭವಾಗಲಿದೆ.