ಜನರ ಭಾವನೆಗಳನ್ನು ಕೆರಳಿಸುವಂತ ಕೆಲಸವನ್ನು ರಾಜಕಾರಣಿಗಳು ಮಾಡುತ್ತಿದ್ದಾರೆ. ಇಂತಹ ಕೃತ್ಯವನ್ನು ಯಾರೂ ಮಾಡಬಾರದೆಂಬ ಸಂದೇಶ ನೀಡಲು ಇಚ್ಚೀಸುತ್ತೇವೆ. ಭಾರತೀಯ ಸಂಸ್ಕೃತಿಯಲ್ಲಿ ಎಲ್ಲರೂ ಒಂದಾಗಿ ಬಾಳಬೇಕು, ಶಾಂತಿ, ನೆಮ್ಮದಿಯಿಂದ ಬದುಕು ಕಟ್ಟಿಕೊಳ್ಳಬೇಕು. ಪ್ರತಿಯೊಬ್ಬರೂ ತಮ್ಮ, ತಮ್ಮ ಧರ್ಮಗಳಲ್ಲಿ ನಿಷ್ಠೆ ಹೊಂದಬೇಕು
ಪರಧರ್ಮದ ಬಗ್ಗೆ ಸಂಹಿಷ್ಣತಾ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ಮಾತ್ರ ಧರ್ಮ, ಜಾತಿಗಳ ಮಧ್ಯೆ ಸಂಘರ್ಷ ತಡೆಯಲು ಸಾಧ್ಯ. ಸ್ವಾಭಿಮಾನದ ಕೊರತೆಯಿಂದಾಗಿ ಎಲ್ಲ ರಂಗಗಳಲ್ಲಿ ಅನೇಕ ಸಂಘರ್ಷ ಉಂಟಾಗುತ್ತಿವೆ. ಸ್ವಾಭಿಮಾನದ ಜೀವನ ಪ್ರತಿಯೊಬ್ಬರದ್ದಾಗಬೇಕು ಎಂದ ಸ್ವಾಮೀಜಿ..