ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆ ಬಾಧಿತ ಈ ಪಂದ್ಯದಲ್ಲಿ 51 ರನ್ಗಳೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 213 ರನ್ಗಳಿಸುವಷ್ಟರಲ್ಲಿ 9 ವಿಕೆಟ್ ಕಳೆದುಕೊಂಡಿತು. ಅತ್ತ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್ನಲ್ಲಿ 445 ರನ್ಗಳಿಸಿದ್ದರಿಂದ ಟೀಮ್ ಇಂಡಿಯಾ ಫಾಲೋಆನ್ ತಪ್ಪಿಸಿಕೊಳ್ಳಲು 246 ರನ್ ಕಲೆಹಾಕುವುದು ಅನಿವಾರ್ಯವಾಗಿತ್ತು.