ಧಾರಾಕಾರ ಮಳೆಗೆ ತುಂಬಿ ಹರಿದ ಕುಮದ್ವತಿ- ಸೇತುವೆ ಮುಳುಗಡೆ

  • Zee Media Bureau
  • Aug 11, 2022, 03:24 PM IST

ಹಾವೇರಿ ಜಿಲ್ಲೆಯಲ್ಲಿ ನಿರಂತರ ಜಿಟಿ ಜಿಟಿ ಮಳೆಗೆ ಕುಮದ್ವತಿ ನದಿ ತುಂಬಿ ಹರಿಯುತ್ತಿದೆ. ಪರಿಣಾಮ ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಿರೋ ಸೇತುವೆ ಮುಳುಗಡೆಯಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಣಕೂರು-ಲಿಂಗದಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕುಮದ್ವತಿ ನದಿ ಅಪಾಯದ ಮಟ್ಟ ಮೀರಿದೆ. ಇದರಿಂದ ಸೇತುವೆ ಪಕ್ಕದ ನೂರಾರು ಎಕರೆ ಜಮೀನುಗಳಿಗೆ  ನೀರು ನುಗ್ಗಿದೆ.

Trending News