ಮೈಸೂರು-ಕೊಡಗು ಟಿಕೆಟ್‌ ಯದುವೀರ್‌ಗೆ ಘೋಷಣೆ: ಫೇಸ್‌ಬುಕ್‌ ಪೋಸ್ಟ್‌ ಮಾಡಿ ಪಿಎಂ ಮೋದಿಗೆ ಧನ್ಯವಾದ

  • Zee Media Bureau
  • Mar 14, 2024, 03:55 PM IST

ಸಮಸ್ತ ಮೈಸೂರು-ಕೊಡಗು ಪ್ರಜಾಬಾಂಧವರಿಗೆ ನನ್ನ ನಮಸ್ಕಾರ, ನಿಮ್ಮೆಲ್ಲರಿಗೂ ಈಗಾಗಲೇ ತಿಳಿದಿರುವಂತೆ, ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ.

Trending News