16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮಿಡಿಯಾ ಬಳಕೆಯನ್ನು ಆಸ್ಟ್ರೇಲಿಯಾ ಸರ್ಕಾರ ಸಂಪೂರ್ಣವಾಗಿ ನಿಷೇಧಿಸಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧದ ಮಸೂದೆಯನ್ನು ಆಸ್ಟ್ರೇಲಿಯಾ ಸರ್ಕಾರ ಗುರುವಾರ ಅಂಗೀಕರಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗುತ್ತಿದ್ದು ಇದು ಅವರ ವಿಧ್ಯಾಭ್ಯಾಸದ ಮೇಲೆ ಹಾಗೂ ಅವರ ಮನಸ್ಥಿತಿಯ ಮೇಲೆ ಭಾರೀ ಪ್ರಭಾವ ಬೀರುತ್ತದೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಆಸ್ಟ್ರೇಲಿಯಾ ಸರ್ಕಾರ ಈ ಮಸೂದೆಯನ್ನು ತಂದಿದೆ.