ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರಿಗೆ ಬುಲಾವ್‌

  • Zee Media Bureau
  • Jul 16, 2022, 06:38 PM IST

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಿಗೆ ಇಂದು ಸಂಜೆಯೇ ಬೆಂಗಳೂರಿಗೆ ಆಗಮಿಸಲು ಸೂಚಿಸಲಾಗಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಎಲ್ಲ ಶಾಸಕರನ್ನು ಒಂದೆಡೆ ಸೇರಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಮತದಾನ ಪ್ರಕ್ರಿಯೆ ಕುರಿತು ಶಾಸಕರಿಗೆ ತರಬೇತಿ ನೀಡಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದ್ದು, ಅದೇ ಕಾರಣಕ್ಕೆ ಇಂದೇ ಬೆಂಗಳೂರಿಗೆ ಆಗಮಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸತೀಶ್ ರೆಡ್ಡಿ ಸೂಚನೆ ನೀಡಿದ್ದಾರೆ.

Trending News