ಆರೋಪಿಗಳಿಗೆ ಆ.15ರವರೆಗೆ ಪೊಲೀಸ್ ಕಸ್ಟಡಿ

  • Zee Media Bureau
  • Aug 4, 2022, 04:00 PM IST

ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳಿಗೆ ಮಂಗಳೂರು ನ್ಯಾಯಾಲಯ ಆಗಸ್ಟ್ 15ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ. ಆರೋಪಿಗಳಾದ ಸುಹಾಸ್ ಶೆಟ್ಟಿ, ಮೋಹನ್ ಆಲಿಯಾಸ್ ಮೋಹನ್ ಸಿಂಗ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್‌ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚುವರಿ ಮಾಹಿತಿ ಕಲೆ ಹಾಕುವ ಸಲುವಾಗಿ 2 ವಾರಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಕೇಳಿಕೊಂಡಿದ್ದರು. ಅದರಂತೆ ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. 
 

Trending News