ವಾಯುವ್ಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆ

  • Zee Media Bureau
  • May 27, 2022, 02:05 PM IST

ಜೂನ್ 13 ರಂದು ವಾಯುವ್ಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು ಚುನಾವಣಾ ಅಖಾಡ ರಂಗೇರಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟ ಮೂರು‌ ಜಿಲ್ಲೆಗಳ ವ್ಯಾಪ್ತಿಗೆ ಬರುವ ಕ್ಷೇತ್ರದಲ್ಲಿ ಎಲ್ಲಾ ನಾಯಕರು ಹೆಚ್ಚಿನ ಪ್ರಚಾರ ನಡೆಸುತ್ತಿರೋದು, ಗಮನ ವಹಿಸಿರೋದು ಉಪವಿಭಾಗ ಕೇಂದ್ರ ಸ್ಥಾನ ಬೆಳಗಾವಿಯಲ್ಲಿ. ಕಾರಣ ಮೂರು ಕ್ಷೇತ್ರಗಳ ಪೈಕಿ ಬೆಳಗಾವಿಯಲ್ಲೇ ಅತಿ ಹೆಚ್ಚು ಮತದಾರರಿದ್ದಾರೆ‌. ಇಂದು ವಾಯುವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ, ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು‌. ಇದಕ್ಕೂ ಮುನ್ನ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಬಿಜೆಪಿ ಹಾಲಿ, ಮಾಜಿ ಶಾಸಕರು, ಸಂಸದರು, ಎಂಎಲ್‌ಸಿಗಳು ಹಾಗೂ ಪ್ರಮುಖ ನಾಯಕರ ಸಭೆ ನಡೆಸಿದರು. ಕಳೆದ ಕೆಲ ದಿನಗಳಿಂದ ಬಿಜೆಪಿ ಸಭೆ, ಸಮಾವೇಶಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಭೆಗೆ ಆಗಮಿಸಿದ್ದರು. ಸಭೆಯ ಮುಖ್ಯವೇದಿಕೆಯಲ್ಲಿ ನಳಿನ್‌ಕುಮಾರ್ ಕಟೀಲ್ ಸೇರಿ ಇತರರು ಹಾಜರಿದ್ರು. 

Trending News