Viral Video: ಬಹು ಮಹಡಿ ಕಟ್ಟಡದಿಂದ ಜಿಗಿದು 12ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ! ಕಾರಣವೇನು ಗೊತ್ತಾ..?

Viral Video: ಮೃತ ವಿದ್ಯಾರ್ಥಿನಿ ಜೆಇಇ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ತೇರ್ಗಡೆಯಾಗಿರಲಿಲ್ಲ. ಈ ಘಟನೆ ಶುಕ್ರವಾರ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಬಾಲಕಿ ಡೆತ್‌ನೋಟ್ ಸಹ ಬರೆದಿದ್ದಳು. ಪೊಲೀಸರು ಸೂಸೈಡ್‌ ನೋಟ್‌ ಅನ್ನು ವಶಪಡಿಸಿಕೊಂಡಿದ್ದಾರೆ. 

Written by - Puttaraj K Alur | Last Updated : Oct 27, 2024, 06:31 PM IST
  • "ಕ್ಷಮಿಸಿ, ನನಗೆ ಪಾಸಾಗಲು ಸಾಧ್ಯವಾಗ್ತಿಲ್ಲ"ವೆಂದು ವಿದ್ಯಾರ್ಥಿನಿ ಆತ್ಮಹತ್ಯೆ!
  • ಬಹು ಮಹಡಿ ಕಟ್ಟಡದಿಂದ ಜಿಗಿದು 12ನೇ ತರಗತಿ ವಿದ್ಯಾರ್ಥಿ ಸೂಸೈಡ್
  • ಕಟ್ಟಡದಿಂದ ಬೀಳುತ್ತಿರುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
Viral Video: ಬಹು ಮಹಡಿ ಕಟ್ಟಡದಿಂದ ಜಿಗಿದು 12ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ! ಕಾರಣವೇನು ಗೊತ್ತಾ..? title=
ವಿದ್ಯಾರ್ಥಿನಿ ಆತ್ಮಹತ್ಯೆ!

Viral Video: ಇತ್ತೀಚಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಮತ್ತೊಬ್ಬ ವಿದ್ಯಾರ್ಥಿನಿ ದೆಹಲಿಯಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು, ದೆಹಲಿಯ ಜಾಮಿಯಾ ನಗರ ಪ್ರದೇಶದಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬಳು ಬಹು ಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಘಟನೆ ಸಂಚಲನ ಮೂಡಿಸಿದ್ದು, ವಿದ್ಯಾರ್ಥಿನಿ ಸಾವಿನಿಂದ ಕುಟುಂಬಸ್ಥರಿಗೆ ಶಾಕ್‌ ಉಂಟಾಗಿದೆ. ಕೇವಲ 17 ವರ್ಷ ವಿದ್ಯಾರ್ಥಿನಿ ದುಡುಕು ನಿರ್ಧಾರ ತೆಗೆದುಕೊಂಡಿದ್ದಾಳೆ. ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಸಿಸಿಟಿವಿ ವಿಡಿಯೋ ಸಖತ್ ವೈರಲ್ ಆಗಿದೆ. ಆಕೆ ಬಹು ಮಹಡಿ ಕಟ್ಟಡದಿಂದ ರಸ್ತೆಗೆ ಬೀಳುತ್ತಿರುವುದು ದೃಶ್ಯವು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. 

ಇದನ್ನೂ ಓದಿ: ದೇಶದಲ್ಲಿ ಅತಿ ಹೆಚ್ಚು ದೇವಾಲಯಗಳನ್ನು ಹೊಂದಿರುವ ರಾಜ್ಯ ಯಾವುದು ಗೊತ್ತೆ..? ಈ ರಾಜ್ಯದಲ್ಲಿ 79000 ದೇಗುಲಗಳಿವೆ..

ಮೃತ ವಿದ್ಯಾರ್ಥಿನಿ ಜೆಇಇ ಪರೀಕ್ಷೆ ಬರೆದಿದ್ದು, ಪರೀಕ್ಷೆಯಲ್ಲಿ ತೇರ್ಗಡೆಯಾಗಿರಲಿಲ್ಲ. ಈ ಘಟನೆ ಶುಕ್ರವಾರ ನಡೆದಿದ್ದು, ಆತ್ಮಹತ್ಯೆಗೂ ಮುನ್ನ ಬಾಲಕಿ ಡೆತ್‌ನೋಟ್ ಸಹ ಬರೆದಿದ್ದಳು. ಪೊಲೀಸರು ಸೂಸೈಡ್‌ ನೋಟ್‌ ಅನ್ನು ವಶಪಡಿಸಿಕೊಂಡಿದ್ದಾರೆ. 

ಘಟನೆಯ ನಂತರ ಸ್ಥಳದಲ್ಲಿ ಅಪಾರ ಸಂಖ್ಯೆಯ ಜನರು ಜಮಾಯಿಸಿದ್ದರು. ಕಟ್ಟಡದಿಂದ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ. ಸ್ಥಳೀಯರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಹ ಸಾಕಷ್ಟು ಭಯಾನಕವಾಗಿದೆ. ಈಗಾಗಲೇ ಲಕ್ಷಾಂತರ ಜನರು ಈ ವಿಡಿಯೋವನ್ನು ವೀಕ್ಷಿಸಿದ್ದು, ಆಘಾತ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ: ಅದಾನಿ ಕುರಿತು ಹಿಂಡನ್ ಬರ್ಗ್ ಸ್ಪೋಟಕ ವರದಿ; ಜಾಣ ನಡೆ ಇಟ್ಟ ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News