Viral Video: ನದಿ ನೀರಿನಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಕಳೆದೆರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ.
ವೈರಲ್ ಆಗಿರುವ ವಿಡಿಯೋದಲ್ಲಿ ಜಯೇಶ್ ಅಂಬ್ರೆ ಎಂಬ ಯುವಕ ಸ್ನೇಹಿತರ ಕಣ್ಣೆದುರಲ್ಲೇ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಸ್ನೇಹಿತರು ಸಹಾಯ ಮಾಡಲು ಪ್ರಯತ್ನಿಸಿದರೂ ಸಹ ನೀರಿನ ಸೆಳೆತಕ್ಕೆ ಆತ ಕೊಚ್ಚಿ ಹೋಗಿದ್ದಾನೆ. ಸದ್ಯಕ್ಕೆ ಯುವಕ ಪತ್ತೆಯಾಗಿಲ್ಲ, ಆತನ ಪತ್ತೆಗೆ ನಗರಸಭೆ ಹಾಗೂ ಆಡಳಿತ ಮಂಡಳಿ ಶೋಧ ಕಾರ್ಯ ಆರಂಭಿಸಿದೆ.
ಇದನ್ನೂ ಓದಿ: ಅನಂತ್ ಅಂಬಾನಿ ಮದುವೆಯಲ್ಲಿ ವಿಶೇಷ ಸಾಮಗ್ರಿಯೊಂದಿಗೆ ಕಾಣಿಸಿಕೊಂಡ ನೀತಾ ಅಂಬಾನಿ!! ಅದೇನದು ?
रत्नागिरी जिल्ह्यात मुसळधार पावसाने पूरस्थिती निर्माण झाली आहे. खेडमध्ये शेल्डी धरणाच्या प्रवाहातून 32 वर्षीय तरुण वाहून गेल्याची घटना घडली आहे.#ratnagiri #Khed #ViralVideos #Maharashtra pic.twitter.com/zesgQ79WIQ
— Satish Daud Patil (@Satish_Daud) July 15, 2024
ರಕ್ಷಣಾ ತಂಡಗಳು ಸಹ ನೀರಿನಲ್ಲಿ ಕೊಚ್ಚಿ ಹೋಗಿರುವ ಜಯೇಶ್‌ಗಾಗಿ ಹುಡುಕಾಟ ನಡೆಸುತ್ತಿವೆ. ಆತ ನೀರಿಗೆ ಇಳಿದ ಬಳಿಕ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ಆತನ ಸ್ನೇಹಿತರು ಸಹ ರಕ್ಷಣೆಗೆ ಮುಂದಾದರೂ ಪ್ರಯೋಜನವಾಗಿಲ್ಲ. ನೀರಿನ ಸೆಳೆತ ಜಾಸ್ತಿ ಇದ್ದಿದ್ದರಿಂದ ಕಾಪಾಡಲು ಸಾಧ್ಯವಾಗಿಲ್ಲ. @Satish_Daud ಎಂಬುವರ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಲಕ್ಷಾಂತರ ಜನರು ವೀಕ್ಷಿಸಿದ್ದಾರೆ.
ಸದ್ಯ ಮಹಾರಾಷ್ಟ್ರದ ವಿವಿಧೆಡೆ ಮಳೆಯ ಅಬ್ಬರ ಜೋರಾಗಿದ್ದು, ಹಲವಾರು ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರತ್ನಗಿರಿ, ಕೊಂಕಣದಲ್ಲಿ ಭಾರೀ ಮಳೆಯಾಗಿದ್ದು, ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಕೆಲವು ಕಡೆ ರಸ್ತೆಗಳು ಕುಸಿದಿದ್ದು, ಭೂಕುಸಿತದಿಂದ ಹಲವು ಮಾರ್ಗಗಳಲ್ಲಿ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ನದಿ, ಜಲಪಾತದ ಕಡೆ ಹೋಗಬಾರದು ಅಂತಾ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ಫೋಟೋ ಶೂಟ್ ಮಧ್ಯೆ ರೈಲು ಬಂತು.. 90 ಅಡಿ ಕಂದಕಕ್ಕೆ ಹಾರಿದ ಜೋಡಿ!! ವಿಡಿಯೋ ವೈರಲ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.