ಕಳಸ: ವಿದ್ಯುತ್ ವ್ಯತ್ಯಯ ಹಿನ್ನೆಲೆ ಮೆಸ್ಕಾಂ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಿರೇಬೈಲ್ ಗ್ರಾಮದಲ್ಲಿ ನಡೆದಿದೆ.
ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯವು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಮೆಸ್ಕಾಂ ಸಿಬ್ಬಂದಿ ಹೇಮಂತ್ ಎಂಬುವರ ಮೇಲೆ ಆರೇಳು ಜನರ ತಂಡ ಹಲ್ಲೆ ನಡೆಸಿದೆ. ಹಲ್ಲೆ ಘಟನೆ ಖಂಡಿಸಿರುವ ಅನೇಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಅಬ್ಬಬ್ಬಾ...ಡ್ರಗ್ ದಂಧೆಕೋರರಿಂದ ವಶಕ್ಕೆ ಪಡೆದ ಹೆರಾಯಿನ್ ಮೌಲ್ಯ ಎಷ್ಟು ಗೊತ್ತಾ!
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಿತ್ತು. ಕರೆಂಟ್ ಸಮರ್ಪಕವಾಗಿ ನೀಡುತ್ತಿಲ್ಲ, ವಿದ್ಯುತ್ ಏಕೆ ಕಡಿತ ಮಾಡಲಾಗಿದೆ ಎಂದು ಪ್ರಶ್ನಿಸಿ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ.
ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಯಾಗಿದೆ. ತಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಮೆಸ್ಕಾಂ ಸಿಬ್ಬಂದಿ ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ: 7 ಮಂದಿ ದುರ್ಮರಣ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.