ಕೆಲ ದಿನಗಳಿಂದೀಚೆಗೆ ಗ್ರಾಮಗಳಿಗೆ ಕಾಡುಪ್ರಾಣಿಗಳು ಲಗ್ಗೆ ಇಟ್ಟು ಅಪಾರ ಪ್ರಮಾಣದಲ್ಲಿ ಹಾನಿಯುಂಟು ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ಅಂತೆಯೇ ಭೀತಿಯನ್ನು ಸಹ ಸೃಷ್ಠಿಸುತ್ತಿವೆ. ಇನ್ನು ಇಂತಹ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದ್ದು, ಚಿರತೆಯೊಂದು ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದಲ್ಲದೆ, ಪೊಲೀಸರ ಮೇಲೆ ದಾಳಿ ನಡೆಸಿದೆ.
ಇದನ್ನು ಓದಿ: ಎರಡು ಬಾಟಲ್ ಎಣ್ಣೆ ಹೊಡೆದ್ರೂ ನಶೆ ಏರ್ತಿಲ್ಲ.. ಗೃಹ ಸಚಿವರಿಗೆ ಕುಡುಕನ ಪತ್ರ
ಹರಿಯಾಣದ ಪಾಣಿಪತ್ ಜಿಲ್ಲೆಯ ಗ್ರಾಮಕ್ಕೆ ಚಿರತೆ ಪ್ರವೇಶಿಸಿದ್ದು, ಜನರು ಭೀತಿಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರ ಮೇಲೆ ಕಾಡುಪ್ರಾಣಿ ದಾಳಿ ನಡೆಸಿದೆ. ಪಾಳು ಬಿದ್ದ ಕಟ್ಟಡವೊಂದರಲ್ಲಿ ಈ ಚಿರತೆ ಅಡಗಿ ಕುಳಿತುಕೊಂಡಿತ್ತು. ಈ ಸಂದರ್ಭದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿದಾಗ ಅವಿತಿದ್ದ ಚಿರತೆ ಓಡಿಹೋಗಲು ಯತ್ನಿಸಿದೆ. ಅಷ್ಟೇ ಅಲ್ಲದೆ, ಅಲ್ಲಿಯೇ ಇದ್ದ ಪೊಲೀಸರ ಮೇಲೆ ಎಗರಿದೆ. ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದ್ದು, ಎದೆ ಝಲ್ ಎನಿಸುವಂತಿದೆ.
Tough day at work for people from police and forest dept.. A couple of them suffered injuries..Salute to their bravery and courage..In the end, everyone is safe..Including the leopard.. pic.twitter.com/wbP9UqBOsF
— Shashank Kumar Sawan (@shashanksawan) May 8, 2022
ಇನ್ನು ಘಟನೆಯ ಬಗ್ಗೆ ವಿಡಿಯೋ ಶೇರ್ ಮಾಡಿರುವ ಪಾಣಿಪತ್ ಎಸ್‌ಪಿ ಶಶಾಂಕ್ ಕುಮಾರ್ ಸಾವನ್, "ಚಿರತೆಯನ್ನು ಸೆರೆ ಹಿಡಿಯುವಲ್ಲಿ ನಮ್ಮ ಸಿಬ್ಬಂದಿ ಸಾಹಸ ಪ್ರದರ್ಶಿಸಿದ್ದಾರೆ. ಈ ಸಂಬಂಧ ವಿಡಿಯೋ ಇಲ್ಲಿದೆ. ಇನ್ನು ಅದೃಷ್ಟವಶಾತ್ ಚಿರತೆ ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ: ಶಾಲೆಯೊಂದರಲ್ಲಿ 64 ವಿದ್ಯಾರ್ಥಿಗಳಿಗೆ ಕೊರೊನಾ ಧೃಢ, ಹೈಅಲರ್ಟ್..!
ಚಿರತೆ ದಾಳಿಯಲ್ಲಿ ಹೆಡ್ ಕಾನ್‌ಸ್ಟೇಬಲ್ ಸೇರಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.