Viral Video: ವಿದ್ಯಾರ್ಥಿನಿಯರೊಂದಿಗೆ ಸರ್ಕಾರಿ ಶಾಲಾ ಶಿಕ್ಷಕಿಯ ಭರ್ಜರಿ ಡ್ಯಾನ್ಸ್..!

ಶಾಲಾ ಕೊಠಡಿಯೊಂದರಲ್ಲಿ ತಮ್ಮ ವಿದ್ಯಾರ್ಥಿಗಳೊಂದಿಗೆ ಶಿಕ್ಷಕಿ ಅದ್ಭುತವಾಗಿ ನೃತ್ಯ ಮಾಡಿರುವುದು ಗಮನ ಸೆಳೆಯುತ್ತಿದೆ.

Written by - Puttaraj K Alur | Last Updated : Jun 19, 2022, 12:48 PM IST
  • ವಿದ್ಯಾರ್ಥಿನಿಯರೊಂದಿಗೆ ಸರ್ಕಾರಿ ಶಾಲಾ ಶಿಕ್ಷಕಿಯ ಭರ್ಜರಿ ಡ್ಯಾನ್ಸ್
  • ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿರುವ ವಿಡಿಯೋ
  • ದೆಹಲಿ ಸರ್ಕಾರಿ ಶಾಲಾ ಶಿಕ್ಷಕಿಯ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
Viral Video: ವಿದ್ಯಾರ್ಥಿನಿಯರೊಂದಿಗೆ ಸರ್ಕಾರಿ ಶಾಲಾ ಶಿಕ್ಷಕಿಯ ಭರ್ಜರಿ ಡ್ಯಾನ್ಸ್..!   title=
ಸರ್ಕಾರಿ ಶಾಲಾ ಶಿಕ್ಷಕಿಯ ಭರ್ಜರಿ ಡ್ಯಾನ್ಸ್

ನವದೆಹಲಿ: ವಿದ್ಯಾರ್ಥಿನಿಯರೊಂದಿಗೆ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಭರ್ಜರಿ ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಆಶಾ ಭೋಸ್ಲೆ ಮತ್ತು ಶಂಶಾದ್ ಬೇಗಂ ಅವರು ಹಾಡಿರುವ ‘ಕಿಸ್ಮತ್’ ಹಿಂದಿ ಸಿನಿಮಾದ ಕ್ಲಾಸಿಕ್ ಹಾಡಿಗೆ ಶಾಲಾ ಶಿಕ್ಷಕಿ ವಿದ್ಯಾರ್ಥಿನಿಯರೊಂದಿಗೆ ನೃತ್ಯ ಮಾಡಿದ್ದಾರೆ. ಅವರ ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಏನನ್ನೂ ಹೇಳಿಕೊಡುವುದಿಲ್ಲವೆಂದು ಹೇಳುವವರಿಗೆ ಈ ಶಿಕ್ಷಕಿ ಮಾದರಿಯಾಗಿದ್ದಾರೆ.

ಇದನ್ನೂ ಓದಿ: IMD Alert: ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ!

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ನೀಡಲಾಗುತ್ತೆ ಅನ್ನೋದನ್ನು ಈ ಶಿಕ್ಷಕಿ ತೋರಿಸಿಕೊಟ್ಟಿದ್ದಾರೆ. ಕಿಸ್ಮತ್ ಚಿತ್ರದ ‘Dilli sheher ka saara Meena Bazaar leke’ ಕ್ಲಾಸಿಕ್ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ಇದೀಗ ಇಂಟರ್‍ನೆಟ್‍ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ.   

ದೆಹಲಿಯ ಸರ್ಕಾರಿ ಶಾಲೆಯ ಶಿಕ್ಷಕಿ ಮನು ಗುಲಾಟಿ(Manu Gulati)ಯವರೇ ವಿದ್ಯಾರ್ಥಿನಿಯರೊಂದಿಗೆ ಡ್ಯಾನ್ಸ್ ಮಾಡಿದ್ದಾರೆ. ಸಮ್ಮರ್​ ಕ್ಯಾಂಪ್​ನ ಕೊನೇ ದಿನದಂದು ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಸ್ಟೆಪ್ಸ್​ ಹಾಕಿರುವ ಶಿಕ್ಷಕಿಯ ಮನೋಜ್ಞ ನೃತ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಸ್ವತಃ ಶಿಕ್ಷಕಿಯೇ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:  'ಹಿಂಸೆ ಯಾವುದೇ ಧರ್ಮದ ಹೆಸರಿನಲ್ಲಿ ನಡೆದರೂ ಅದು ದೊಡ್ಡ ಪಾಪ'- ನಟಿ ಸಾಯಿ ಪಲ್ಲವಿ

ಶೇರ್ ಆದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಪ್ರತಿಯೊಂದು ಶಾಲೆಗಳಲ್ಲೂ ಇಂತಹ ಶಿಕ್ಷಕಿಯರು ಇರಬೇಕು. ಮಕ್ಕಳಿಗೆ ಪ್ರೋತ್ಸಾಹ ಕೊಡುವ ಶಿಕ್ಷಕರೇ ಇಂದು ಅಗತ್ಯವಾಗಿ ಬೇಕಾಗಿದ್ದಾರೆ. ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಮನಸ್ಸುಳ್ಳ ಶಿಕ್ಷಕರು ಇದ್ದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಎಂದು ವಿಡಿಯೋ ನೋಡಿದ ಅನೇಕರು ಕಾಮೆಂಟ್ ಮಾಡಿದ್ದಾರೆ.    

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News