Viral Video: ಜಲಪಾತದ ಬಳಿ ಫೋಟೋಗೆ ಪೋಸ್ ನೀಡುತ್ತಿದ್ದ ಯುವಕನಿಗೆ ಏನಾಯ್ತು ನೋಡಿ..?

ತಮಿಳುನಾಡಿನ ಕೊಡೈಕೆನಾಲ್‌ನಲ್ಲಿ ಫೋಟೋಗೆ ಪೋಸು ಕೊಡುತ್ತಿದ್ದ ಯುವಕನೊಬ್ಬ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾನೆ.

Written by - Puttaraj K Alur | Last Updated : Aug 6, 2022, 11:21 AM IST
  • ಫೋಟೋಗೆ ಪೋಸ್ ನೀಡುತ್ತಿದ್ದ ವೇಳೆ ಕಾಲುಜಾರಿ ಜಲಪಾತಕ್ಕೆ ಬಿದ್ದ ಯುವಕ
  • ತಮಿಳುನಾಡಿನ ಕೊಡೈಕೆನಾಲ್‌ನಲ್ಲಿ ನಡೆದಿರುವ ಘಟನೆಯ ವಿಡಿಯೋ ವೈರಲ್
  • ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗದ ಯುವಕ
Viral Video: ಜಲಪಾತದ ಬಳಿ ಫೋಟೋಗೆ ಪೋಸ್ ನೀಡುತ್ತಿದ್ದ ಯುವಕನಿಗೆ ಏನಾಯ್ತು ನೋಡಿ..?  title=
ಕಾಲುಜಾರಿ ಜಲಪಾತಕ್ಕೆ ಬಿದ್ದ ಯುವಕ!

ಕೊಡೈಕೆನಾಲ್‌: ಸೆ‍ಲ್ಫಿ ಹುಚ್ಚಿಗೆ ಅನೇಕರು ಪ್ರಾಣ ಕಳೆದುಕೊಂಡಿರುವ ಸುದ್ದಿಯನ್ನು ನೀವು ಓದಿರುತ್ತೀರಿ. ಅದೇ ರೀತಿಯ ಮತ್ತೊಂದು ಘಟನೆ ತಮಿಳುನಾಡಿನ ಕೊಡೈಕೆನಾಲ್‌ನಲ್ಲಿ ನಡೆದಿದೆ. ಫೋಟೋಗೆ ಪೋಸು ಕೊಡುತ್ತಿದ್ದ ಯುವಕನೊಬ್ಬ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಅಂದಹಾಗೆ ಈ ಘಟನೆ ಆಗಸ್ಟ್ 3ರ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಯುವಕ ಅಜಯ್ ಪಾಂಡಿಯನ್ ಜಲಪಾತದ ಬಳಿ ನಿಂತು ಫೋಟೋಗೆ ಪೋಸು ನೀಡುತ್ತಿದ್ದ. ಜಲಪಾತದ ಬಂಡೆಗಳ ಮೇಲೆ ನಿಂತು ತನ್ನ ಸ್ನೇಹಿತನಿಗೆ ಫೋಟೋ ತೆಗೆಯಲು ಹೇಳಿದ್ದಾನೆ. ಈ ವೇಳೆ ಆತನ ಸ್ನೇಹಿತ ಹುಷಾರು.. ಹುಷಾರು.. ಎಂದು ಹೇಳಿದ್ದಾನೆ. ಬಂಡೆಗಳ ಮೇಲೆ ಪಾಚಿ ಕಟ್ಟಿದ್ದರಿಂದ ಆತನ ಕಾಲು ಜಾರಿ ತುಂಬಿ ಹರಿಯುತ್ತಿದ್ದ ಜಲಪಾತಕ್ಕೆ ಬಿದ್ದಿದ್ದಾನೆ. ಇಡೀ ಘಟನೆಯ ವಿಡಿಯೋವನ್ನು ಆತನ ಸ್ನೇಹಿತ ತನ್ನ ಮೊಬೈಲ್‍ನಲ್ಲಿ ಸೆರೆಹಿಡಿದಿದ್ದು, ಭಯಾನಕವಾಗಿದೆ.

ಇದನ್ನೂ ಓದಿ: Viral Video: ಭೀಕರ ಪ್ರವಾಹದಲ್ಲಿಯೂ ಮದುವೆ ಮೆರವಣಿಗೆ: ಇಷ್ಟು ಕಷ್ಟದಲ್ಲಿ ಬೇಕಿತ್ತಾ ವಿವಾಹ!

ವಿಷಯ ತಿಳಿದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಕಾಣೆಯಾಗಿರುವ ಯುವಕ ಇದುವರೆಗೂ ಪತ್ತೆಯಾಗಿಲ್ಲ. 47 ಸೆಕೆಂಡುಗಳ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಜಯ್ ಎಡವಿ ನೀರಲ್ಲಿ ಕೊಚ್ಚಿಹೋಗುತ್ತಿರುವಾಗ ಆತನ ಸ್ನೇಹಿತ ಮಚ್ಚಾ ಎಂದು ಕೂಗುವುದನ್ನು ನೀವು ಕೇಳಬಹುದು. ಶೇರ್ ಆದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋವನ್ನು ಸಾವಿರಾರು ಜನರು ವೀಕ್ಷಿಸಿದ್ದಾರೆ. ಅಪಾಯಕಾರಿ ಸ್ಥಗಳಲ್ಲಿ ಈ ರೀತಿ ಸೆಲ್ಫಿ ತೆಗೆದುಕೊಳ್ಳುವುದು ಸರಿಯಲ್ಲವೆಂದು ನೆಟಿಜನ್‍ಗಳು ಕಾಮೆಂಟ್ ಮಾಡಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಕೆ ಕೈಗೊಂಡಿದ್ದಾರೆ.

ಇದನ್ನೂ ಓದಿ: viral video : ವರ ಕೆನ್ನೆ ಮುಟ್ಟಿದ್ದಕ್ಕೆ ಸಿಟ್ಟಿಗೆದ್ದ ವಧು, ಮಂಟಪದಲ್ಲೇ ಹೊಡೆದಾಡಿಕೊಂಡ ವಧು ವರ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News