Viral Video: ಜಿಮ್‍ನಲ್ಲಿ ವ್ಯಾಯಾಮ ಮಾಡುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು!

Shocking Viral video: ಮಧ್ಯಪ್ರದೇಶದ ಇಂದೋರ್‌ನಲ್ಲಿ ಹೋಟೆಲ್‍ ಮಾಲೀಕರೊಬ್ಬರು ಗುರುವಾರ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Written by - Puttaraj K Alur | Last Updated : Jan 6, 2023, 12:44 PM IST
  • ವ್ಯಾಯಾಮ ಮಾಡುವಾಗಲೇ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ
  • ಮಧ್ಯಪ್ರದೇಶದ ಇಂದೋರ್‍ನಲ್ಲಿ ನಡೆದಿರುವ ಶಾಕಿಂಗ್ ಘಟನೆಯ ವಿಡಿಯೋ ವೈರಲ್
  • ಕಸರತ್ತು ನಡೆಸುತ್ತಲೇ ಹಾರ್ಟ್ ಅಟ್ಯಾಕ್ ಆಗಿ ಕುಸಿದುಬಿದ್ದು ಸಾವನ್ನಪ್ಪಿದ ಹೋಟೆಲ್ ಮಾಲೀಕ
Viral Video: ಜಿಮ್‍ನಲ್ಲಿ ವ್ಯಾಯಾಮ ಮಾಡುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು! title=
ವ್ಯಾಯಾಮ ಮಾಡುವಾಗಲೇ ಹೃದಯಾಘಾತ!

ಇಂದೋರ್: ವ್ಯಾಯಾಮ ಮಾಡುವಾಗಲೇ ವ್ಯಕ್ತಿಯೊಬ್ಬರು ಕುಸಿದುಬಿದ್ದು ಸಾವನ್ನಪ್ಪಿರುವ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ವ್ಯಕ್ತಿಯೊಬ್ಬರು ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದೋರ್‌ನ ಸ್ಕೀಮ್ ನಂಬರ್ 78 ಏರಿಯಾದಲ್ಲಿ ಗುರುವಾರ ಈ ಘಟನೆ ನಡೆದಿದ್ದು, ವ್ಯಾಯಾಮ ಮಾಡಿದ ನಂತರ ಹೋಟೆಲ್ ಮಾಲೀಕ ಪ್ರದೀಪ್ ರಘುವಂಶಿ ಎಂಬುವರಿಗೆ ಹೃದಯಾಘಾತವಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವೈರಲ್ ಆಗಿರೋ ವಿಡಿಯೋದಲ್ಲಿ ಟ್ರೆಡ್‌ಮಿಲ್‌ನಲ್ಲಿ ನಡೆಯುತ್ತಿದ್ದ ಪ್ರದೀಪ್ ರಘುವಂಶಿಯವರು ಬೆವರುತ್ತಿರುವುದನ್ನು ಕಾಣಬಹುದು. ಅವರು ತಮ್ಮ ಜಾಕೆಟ್ ತೆಗೆದಾಗ ತಲೆತಿರುಗುವಿಕೆ ಪ್ರಾರಂಭವಾಗಿದೆ. ಅವರು ಹತ್ತಿರದಲ್ಲಿದ್ದ ಟೇಬಲ್‌ ಹಿಡಿದು ನಿಂತುಕೊಳ್ಳಲು ಹೋಗಿ ಕುಸಿದುಬಿದ್ದಿದ್ದಾರೆ. ಕೂಡಲೇ ಜಿಮ್‌ನಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಯುವಕರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೊಗಿತ್ತು, ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಇದನ್ನೂ ಓದಿ: Big Shock: 18,000 ಉದ್ಯೋಗಿಗಳ ವಜಾ ಮಾಡಲು ಅಮೆಜಾನ್ ನಿರ್ಧಾರ!

ರಘುವಂಶಿಯವರಿಗೆ ಒಬ್ಬ ಪುತ್ರ ಮತ್ತು ಪುತ್ರಿ ಇದ್ದಾರೆ. ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ‘ಗೋಲ್ಡ್ ಜಿಮ್ ನಲ್ಲಿ ಈ ಘಟನೆ ನಡೆದಿದ್ದು, ಹೋಟೆಲ್ ವೃಂದಾವನದ ಮಾಲೀಕ 55 ವರ್ಷದ ಪ್ರದೀಪ್ ರಘುವಂಶಿ ಎಂಬುವರಿಗೆ ಹಾರ್ಟ್‍ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾರೆ ಪ್ರದೀಪ್ ಅವರು ಟ್ರೆಡ್‌ಮಿಲ್‌ನಲ್ಲಿ ನಡೆಯುತ್ತಿದ್ದಾಗ ಹಠಾತ್ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾರೆ. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆಂದು ಘೋಷಿಸಿದರು. ಪ್ರತಿದಿನ 2 ಗಂಟೆಗಳ ಕಾಲ ಜಿಮ್‌ನಲ್ಲಿ ಅವರು ವ್ಯಾಯಾಮ ಮಾಡುತ್ತಿದ್ದರು’ ಎಂದು ಹೇಳಿದ್ದಾರೆ.

ಹೋಟೆಲ್ ಉದ್ಯಮಿ ಪ್ರದೀಪ್ ಅವರ ನಿಕಟ ಸಂಬಂಧಿಗಳ ಪ್ರಕಾರ, ‘ಅವರ ಪುತ್ರನಿಗೆ ಮುಂದಿನ ಕೆಲವು ದಿನಗಳಲ್ಲಿಯೇ ಮದುವೆಯಾಗುವುದಿತ್ತು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರ ಆಪ್ತರಲ್ಲಿ ಒಬ್ಬರಾಗಿದ್ದ ಅವರು ಸಾವನ್ನಪ್ಪಿದ್ದು ನಮಗೆ ತೀವ್ರ ದುಃಖವನ್ನು ತಂದಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Snake Video : ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಹಾವುಗಳ ಮಿಲನ ಮಹೋತ್ಸವ!

ಈ ಹಿಂದೆ 2022ರಲ್ಲಿ ನಟ ಸಿದ್ದಾಂತ್ ವೀರ್ ಸೂರ್ಯವಂಶಿ ಮತ್ತು ಹಾಸ್ಯನಟ ರಾಜು ಶ್ರೀವಾಸ್ತವ್ ಕೂಡ ಜಿಮ್‌ನಲ್ಲಿ ಕುಸಿದುಬದ್ದು ಸಾವನ್ನಪ್ಪಿದ್ದರು. 2021ರಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಸಹ ವರ್ಕೌಟ್ ಬಳಿಕ ಹೃದಯ ಸ್ತಂಭನದಿಂದಾಗಿ ನಿಧನರಾಗಿದ್ದರು. ವರ್ಕೌಟ್ ಮಾಡುವ ಮೊದಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News