Viral Video: ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ ಚಿರತೆ! ಭಯಾನಕ ವಿಡಿಯೋ ಹೇಗಿದೆ ನೋಡಿ

ಕೆ.ಆರ್‌.ನಗರದಿಂದ ಮುಳ್ಳೂರಿಗೆ ಹೋಗುವ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಂಡ ಕಂಡವರ ಮೇಲೆ ದಾಳಿ ಮಾಡಿದೆ.

Written by - Puttaraj K Alur | Last Updated : Nov 4, 2022, 01:30 PM IST
  • ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಚಿರತೆ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದೆ
  • ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕನಕ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ
  • ಚಿರತೆ ದಾಳಿಯಿಂದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವಾಹನ ಸವಾರನಿಗೆ ಗಾಯ
Viral Video: ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ ಚಿರತೆ! ಭಯಾನಕ ವಿಡಿಯೋ ಹೇಗಿದೆ ನೋಡಿ title=
ಸಿಕ್ಕ ಸಿಕ್ಕವರ ಮೇಲೆ ಚಿರತೆ ದಾಳಿ!

ಕೆ.ಆರ್.ನಗರ: ಆಹಾರವನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ಸಿಕ್ಕ ಸಿಕ್ಕವರ ಮೇಲೆ ಮನಬಂದಂತೆ ದಾಳಿ ಮಾಡಿದೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಕನಕ ಗ್ರಾಮದಲ್ಲಿ ಈ ಘಟನೆ ನಡೆದಿದೆ.  

ಕೆ.ಆರ್‌.ನಗರದಿಂದ ಮುಳ್ಳೂರಿಗೆ ಹೋಗುವ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಂಡ ಕಂಡವರ ಮೇಲೆ ದಾಳಿ ಮಾಡಿದೆ. ನಾಯಿ, ಬೈಕ್‌ ಸವಾರ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿದೆ.

ಇದನ್ನೂ ಓದಿ: ಪಾವತಿಯಾಗದ ವಿದ್ಯುತ್ ಬಿಲ್... ಕತ್ತಲಲ್ಲಿ ಐತಿಹಾಸಿಕ ಚಾಮರಾಜೇಶ್ವರ ದೇಗುಲ!!

ಚಿರತೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವಾಹನ ಸವಾರನೊಬ್ಬನಿಗೆ ಗಾಯಗಳಾಗಿವೆ. ಚಿರತೆ ದಾಳಿ ಮಾಡುತ್ತಿರುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.   

ಗುರುವಾರ ರಾತ್ರಿಯೇ ಕೆ.ಆರ್.ನಗರಕ್ಕೆ ಚಿರತೆ ಎಂಟ್ರಿ ಕೊಟ್ಟಿತ್ತು. ರಸ್ತೆ ಮಧ್ಯೆ ಕುಳಿತುಕೊಂಡಿದ್ದ ಚಿರತೆಯನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದರು. ಶುಕ್ರವಾರ ಮತ್ತೆ ಕಾಣಿಸಿಕೊಂಡ ಚಿರತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಓಡಾಡಿ ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿದೆ.

ಇದನ್ನೂ ಓದಿ: Pramod Muthalik: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ಗೆ ಜೀವ ಬೆದರಿಕೆ..!

ಬೈಕ್ ಮೇಲೆ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿದೆ. ಪರಿಣಾಮ ಚಿರತೆ ದಾಳಿಯಿಂದ ಬೈಕ್ ಮೇಲಿಂದ ಬಿದ್ದ ಸವಾರನಿಗೆ ಸಣ್ಣುಪುಟ್ಟ ಗಾಯಗಳಾಗಿವೆ. ಇದೇ ವೇಳೆ ಸ್ಥಳಕ್ಕೆ ಬಂದಿದ್ದ ಅರಣ್ಯ ಸಿಬ್ಬಂದಿಯ ಮೇಲೂ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದರು. ಬಳಿಕ ಅದನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News