School bus tyre explosion: ಸ್ಕೂಲ್ ಬಸ್ ಟೈರ್ ಸ್ಫೋಟಗೊಂಡು 19 ವರ್ಷದ ಯುವಕ ಗಾಯಗೊಂಡಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕೋಟೇಶ್ವರದ ಗ್ಯಾರೇಜ್ನಲ್ಲಿ ಡಿಸೆಂಬರ್ 21ರಂದು ಈ ಘಟನೆ ನಡೆದಿದೆ. ಟೈರ್ ಸ್ಫೋಟದಿಂದ ಯುವಕ ಎಗರಿ ಬಿದ್ದಿರೋ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ಖಾಸಗಿ ಶಾಲಾ ಬಸ್ಸಿನ ಟೈರ್ ಪಂಕ್ಚರ್ ಆಗಿದ್ದರಿಂದ ಅದನ್ನು ರಿಪೇರಿ ಮಾಡಲು ತಂದಿದ್ದಾಗ ಯುವಕ ಗಾಳಿ ತುಂಬುತ್ತಿದ್ದ. ಈ ವೇಳೆ ಘಟನೆ ಸಂಭವಿಸಿದೆ. ಗಾಳಿ ತುಂಬುವಾಗ ಉಂಟಾದ ಒತ್ತಡದಿಂದ ಟೈರ್ ಸ್ಫೋಟವಾಗಿದ್ದು, ಯುವಕ ಗಾಳಿಯಲ್ಲಿ ಹಾರಿ ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 2 ಲಕ್ಷದವರೆಗೆ ಸಾಲ ನೀಡಲು ಬ್ಯಾಂಕ್ ಗಳಿಗೆ ಅನುಮತಿ
𝕂𝔸ℝℕ𝔸𝕋𝔸𝕂𝔸 | A horrific incident occurred in Udupi, Karnataka, leaving onlookers stunned. A mechanic, Abdul Razid, 19, was repairing a puncture on a private school bus's tyre when it suddenly burst. The impact was so severe that Abdul was thrown into the air, landing… pic.twitter.com/ancowhRYK6
— ℝ𝕒𝕛 𝕄𝕒𝕛𝕚 (@Rajmajiofficial) December 23, 2024
ಟೈರ್ ಸ್ಫೋಟವಾಗಿರೋ ಘಟನೆಯು ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಸ್ಫೋಟದ ತೀವ್ರತೆ ಹೇಗಿತ್ತು ಅನ್ನೋದನ್ನು ನೀವು ಕಾಣಬಹುದು. ಸ್ಫೋಟದ ಹೊಡೆತಕ್ಕೆ ಯುವಕ ಮೇಲೆ ಎಗರಿ ಬಿದ್ದಿದ್ದಾನೆ. ಈ ವಿಡಿಯೋ ಎದೆ ನಡುಗಿಸುವಂತಿದೆ.
ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಯುವಕ ಅಬ್ದುಲ್ ರಜೀದ್ (19) ಎಂದು ತಿಳಿದುಬಂದಿದೆ. ಯುವಕನ ಕೈ ಮುರಿದಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದ್ದು, ಸ್ಥಳೀಯ ಪೊಲೀಸರು ಟೈರ್ ಸ್ಫೋಟಕ್ಕೆ ಕಾರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದು, ಆಘಾತ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.