ನವದೆಹಲಿ: ಸೋಷಿಯಲ್ ಮೀಡಿಯಾದಲ್ಲಿ ರಾತ್ರೋರಾತ್ರಿ ಪಾಪುಲರ್ ಆಗಲು ಅನೇಕರು ಇದ್ದು ರೀಲ್ಸ್ ಕ್ರೇಜ್ ಹತ್ತಿಸಿಕೊಂಡಿದ್ದಾರೆ. ರೀಲ್ಸ್ ವ್ಯಾಮೋಹಕ್ಕೆ ಒಳಗಾಗಿರುವ ಅನೇಕರು ಹೆಚ್ಚು ಹೆಚ್ಚು ಜನರ ಗಮನಸೆಳೆಯಲು ಹೋಗಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹೆಚ್ಚಿನ ಲೈಕ್ಸ್ಗಳಿಗಾಗಿ ರೀಲ್ಸ್ ಮಾಡಲು ಹುಚ್ಚು ಸಾಹಸಕ್ಕೆ ಕೈಹಾಕಿ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಅದೇ ರೀತಿಯ ಮತ್ತೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ರೈಲ್ವೆ ಹಳಿಯ ಮೇಲೆ ರೀಲ್ಸ್ ಮಾಡಲು ಹೋಗಿ 14 ವರ್ಷದ ಬಾಲಕನೊಬ್ಬ ದುರಂತ ಅಂತ್ಯ ಕಂಡಿರುವ ಘಟನೆ ನಡೆದಿದೆ. ರೈಲ್ವೆ ಹಳಿ ಮೇಲೆ ಮಲಗಿ ರೀಲ್ಸ್ ಮಾಡಲು ಮುಂದಾದ ವೇಳೆ ಏಕಾಏಕಿ ರೈಲು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ್ದಾನೆ. ಮೃತನನ್ನು ಫರ್ಮಾನ್ ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ಇದನ್ನೂ ಓದಿ: ನಿಮ್ಮ ಬುದ್ದಿ ಶಕ್ತಿಗೆ ನಮ್ಮ ಚಾಲೆಂಜ್: ಈ ಬಾಳೆ ಹಣ್ಣುಗಳ ಮಧ್ಯ ಹಾವು ಅಡಗಿದೆ..! ಅದು ಎಲ್ಲಿದೆ..?
ಈ ಭಯಾನಕ ಮತ್ತು ಆಘಾತಕಾರಿ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ರೀಲ್ಸ್ ಮಾಡಲು ಬಾಲಕ ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಾಲಕ ಸಾಯುವ ಕೊನೆಯ ಕ್ಷಣದ ದೃಶ್ಯವನ್ನು ಆತನ ಸ್ನೇಹಿತರು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ರೀಲ್ಸ್ ಹುಚ್ಚಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಬಾಲಕ ಫರ್ಮಾನ್ ಉತ್ರಪ್ರದೇಶದ ಜಹಾಂಗೀರ್ ಬಾದ್ನ ತೇರಾ ದೌಲತ್ಪುರದ ನಿವಾಸಿ ಎಂದು ತಿಳಿದುಬಂದಿದೆ. ಬಾಲಕ ಫರ್ಮಾನ್ ತನ್ನ ಸ್ನೇಹಿತರೊಂದಿಗೆ ರೀಲ್ಸ್ ಮಾಡಲು ರೈಲ್ವೆ ಹಳಿ ಬಳಿ ಹೋಗಿದ್ದನಂತೆ. ಚಲಿಸುತ್ತಿದ್ದ ರೈಲನ್ನು ಗಮನಿಸದೆ ಆತ ರೀಲ್ಸ್ಗೆ ಹೀರೋ ರೀತಿ ಪೋಸು ಕೊಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಕೇವಲ 5 ಸೆಕೆಂಡುಗಳ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ‘ಯಾರೂ ಈ ರೀತಿಯ ಹುಚ್ಚು ಸಾಹಸಕ್ಕೆ ಕೈಹಾಕಬೇಡಿ’ ಎಂದು ಅನೇಕರು ಮನವಿ ಮಾಡಿಕೊಂಡಿದ್ದಾರೆ.
tw // disturbing
Barabanki: A teenager Farmaan (14) who was purportedly making a video for Instagram reels along the railway tracks was kiIIed when he was struck by a running train. pic.twitter.com/Ysxl895ABD
— زماں (@Delhiite_) September 30, 2023
ಇದನ್ನೂ ಓದಿ: ಬೃಹತ್ ಹೆಬ್ಬಾವನ್ನೇ ಹಿಡಿದು ಆಟವಾಡಿದ ಮಹಿಳೆ..! ವಿಡಿಯೋ ನೋಡಿ ಜನ ಶಾಕ್
ವರದಿಗಳ ಪ್ರಕಾರ ರೈಲು ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಘಟನೆ ಬಗ್ಗೆ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಮೃತನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಅಂತಾ ಹಿರಿಯ ಪೊಲೀಸ್ ಅಧಿಕಾರಿ ಧರ್ಮೇಂದ್ರ ಸಿಂಗ್ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.