Canadian Pacific 2816 Viral Video: ಚಲಿಸುತ್ತಿದ್ದ ರೈಲಿನ ಮುಂದೆ ನಿಂತು ಸೆಲ್ಫಿ ತೆಗೆಯುತ್ತಿದ್ದ ವೇಳೆ ರೈಲು ತಲೆಗೆ ಡಿಕ್ಕಿ ಹೊಡೆದು ಯುವತಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಮೆಕ್ಸಿಕೋದ ಹಿಡಾಲ್ಗೋದಲ್ಲಿ ನಡೆದಿದೆ. ರೈಲು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಕೆನಡಾದಿಂದ ಮೆಕ್ಸಿಕೋ ನಗರಕ್ಕೆ ಪ್ರಯಾಣಿಸುವ ಸ್ಟೀಮ್ ಇಂಜಿನ್ ರೈಲಿನಲ್ಲಿ ಪ್ರತಿದಿನ ನೂರಾರು ಪ್ರಯಾಣಿಕರು ಸಂಚರಿಸುತ್ತಾರೆ. ಹಿಡಾಲ್ಗೊದಲ್ಲಿ ಹಾದುಹೋಗುವಾಗ Canadian Pacific 2816 ಎಂದೇ ಖ್ಯಾತಿಯಾಗಿರುವ ಲೋಕೋಮೋಟಿವ್ ಎಂಪ್ರೆಸ್ 2816ಅನ್ನು ನೋಡಲು ಭಾರೀ ಜನಸಮೂಹ ಜಮಾಯಿಸಿತ್ತು. ಡುಲ್ಸೆ ಅಲೊಂಡ್ರಾ (28) ಎಂಬ ಯುವತಿ ಚಲಿಸುತ್ತಿರುವ ರೈಲಿನ ಹತ್ತಿರ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಳು.
ಇದನ್ನೂ ಓದಿ: Modi 3.0: ಪ್ರಧಾನಿ ಮೋದಿ ಸಚಿವ ಸಂಪುಟದಲ್ಲಿ ಯಾರ್ಯಾರಿಗೆ ಯಾವ ಖಾತೆ ಸಿಗಲಿದೆ ಗೊತ್ತೇ?
MEXICO - In Hidalgo, a famous train that comes from Canada and travels all the way to Mexico City, attracting locals, struck a woman who was trying to take a selfie as the train approached. She passed at the scene. Article in comments. pic.twitter.com/32XdsCehEB
— The Many Faces of Death (@ManyFaces_Death) June 5, 2024
ರೈಲು ಹತ್ತಿರ ಬರುವುದನ್ನು ಕಾಯುತ್ತಿದ್ದ ಆಕೆ ಮೊಣಕಾಲೂರಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾಳೆ. ಆದರೆ ರೈಲು ಎಂಜಿನ್‌ನ ಮುಂಭಾಗದ ಭಾಗವು ಆಕೆಯ ತಲೆಗೆ ಅಪ್ಪಳಿಸಿದೆ. ಹೊಡೆತದ ರಭಸಕ್ಕೆ ತಕ್ಷಣವೇ ನೆಲಕ್ಕೆ ಬಿದ್ದ ಆಕೆ ಮತ್ತೆ ಮೇಲೆ ಏಳಲೇ ಇಲ್ಲ.
ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಡುಲ್ಸೆ ಅಲೊಂಡ್ರಾ ಶಿಕ್ಷಕಿಯಾಗಿದ್ದು, ಆಕೆಗೆ ಪುಟ್ಟ ಮಗುವಿದೆ ಎಂದು ತಿಳಿದುಬಂದಿದೆ. ಆಕೆಯ ತಲೆಗೆ ತೀವ್ರ ಪೆಟ್ಟು ಬಿದ್ದು ಮಿದುಳಿಗೆ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ: ಸಂಸತ್ತಿನ ಸೆಂಟ್ರಲ್ ಹಾಲ್‌ನ ಇತಿಹಾಸದ ಬಗ್ಗೆ ನಿಮಗೆಷ್ಟು ಗೊತ್ತು? ರಾಜಕೀಯ ಪಕ್ಷಗಳು ತಮ್ಮ ಕಾರ್ಯಕ್ರಮಗಳಿಗೆ ಬಳಸಬಹುದೇ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.